ಹರಿಯಾಣದಲ್ಲಿ ಜಾಟ್ ಸಮುದಾಯದ ಧರಣಿ: ಇಂಟರ್ನೆಟ್ ಸೇವೆ ಸ್ಥಗಿತ 
ದೇಶ

ಹರಿಯಾಣದಲ್ಲಿ ಜಾಟ್ ಸಮುದಾಯದ ಧರಣಿ: ಇಂಟರ್ನೆಟ್ ಸೇವೆ ಸ್ಥಗಿತ

ಹಿಂದುಳಿದ ಸಮುದಾಯಕ್ಕೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಜಾಟ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಇದೀಗ ಹರಿಯಾಣಕ್ಕೆ ತಲೆಬಿಸಿಯೊಗುವಂತೆ ಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ಅಲ್ಲಿನ ಸರ್ಕಾರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗುತ್ತಿದೆ...

ಚಂಡೀಗಢ: ಹಿಂದುಳಿದ ಸಮುದಾಯಕ್ಕೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಜಾಟ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಇದೀಗ ಹರಿಯಾಣಕ್ಕೆ ತಲೆಬಿಸಿಯೊಗುವಂತೆ ಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ಅಲ್ಲಿನ ಸರ್ಕಾರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗುತ್ತಿದೆ. 
ಕಳೆದ ಹಲವು ದಿನಗಳಿಂದಲೂ ಜಾಟ್ ಸಮುದಾಯವನ್ನು ಹಿಂದುಳಿದ ಪ್ರವರ್ಗಕ್ಕೆ ಸೇರಿಸುವಂತೆ ಸಮುದಾಯದ ಜನರು ಸರ್ಕಾರಕ್ಕೆ ಆಗ್ರಹಿಸಿದ್ದರು. ಇದೀಗ ಜಾಟ್ ಸಮುದಾಯದ ನಾಯಕರು ಪ್ರತಿಭಟನೆಗಿಳಿದಿದ್ದು, 6 ದಿನಗಳಿಂದಲೂ ಹರಿಯಾಣದಾದ್ಯಂತ ಹಲವು ಪ್ರತಿಭಟನೆಗಳು ನಡೆಸುತ್ತಿದೆ. ಈ ಪ್ರತಿಭಟನೆ ಇಂದು ಕೂಡ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಅಲ್ಲಿನ ಸರ್ಕಾರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗುತ್ತಿದೆ. 
ಹರಿಯಾಣದಲ್ಲಿ ಜಾಟ್‌ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಹರಿಯಾಣ ರಸ್ತೆ ಸಾರಿಗೆ ಸಂಸ್ಥೆಯ ಕೆಲವು ಬಸ್‌ಗಳನ್ನು ಸ್ಥಗಿತಗೊಳಿಸಿದೆ. ಅಗತ್ಯ ವಸ್ತುಗಳ ಸಾಗಾಟಕ್ಕೂ ತೊಂದರೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 
ಈ ಕುರಿತಂತೆ ಮಾತನಾಡಿರುವ ರಾಜ್ಯ ಕೃಷಿ ಸಚಿವ ಒಪಿ.ಧನ್ಕರ್ ಅವರು, ಸಮುದಾಯ ಪ್ರತಿಭಟನೆ ಸಂಬಂಧಿಸಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪ್ರತಿಭಟನೆ ಸಂಬಂಧ ಆಡಳಿತ ಮಂಡಳಿ ಹಾಗೂ ಪೊಲೀಸರು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಬಿಕ್ಕಟ್ಟನ್ನು ಪರಿಹರಿಸುವ ಎಲ್ಲಾ ಪ್ರಯತ್ನಗಳನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದ್ದಾರೆ.
ರೊಹ್ಟಕ್ ನಲ್ಲಿ ನಿನ್ನೆ ನಡೆದ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಪ್ರತಿಭಟನೆ ವೇಳೆ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ವ್ಯಾಪಾರಸ್ಥರು ಹಾಗೂ ವಕೀಲರ ನಡುವೆ ಕೋರ್ಟ್ ಆವರಣದಲ್ಲಿ ಘರ್ಷಣೆ ಏರ್ಪಟ್ಟಿತ್ತು. ಈ ವೇಳೆ ಹಲವು ವಾಹನಗಳು ಜಖಂಗೊಂಡಿದ್ದವು. ನಂತರ ಸ್ಥಳಕ್ಕಾಗಮಿಸಿದ್ದ ಪೊಲೀಸರು ಲಾಠಿ ಜಾರ್ಜ್ ಮಾಡಿ, ಜನರನ್ನು ಚದುರಿಸಲು ಅಶ್ರುವಾಯು ಪ್ರಯೋಗ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!