ನರೇಂದ್ರ ಮೋದಿ ಈಗಲೂ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಸಮೀಕ್ಷೆ
ನರೇಂದ್ರ ಮೋದಿ ಪ್ರಧಾನಿ ಹುದ್ದೆಗೆ ಈಗಲೂ ಅರ್ಹ ಅಭ್ಯರ್ಥಿಯಾಗಿದ್ದಾರೆ ಎಂಬುದು ಜನಭಿಪ್ರಾಯವಾಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
ದೆಹಲಿ: ನರೇಂದ್ರ ಮೋದಿ ಪ್ರಧಾನಿ ಹುದ್ದೆಗೆ ಈಗಲೂ ಅರ್ಹ ಅಭ್ಯರ್ಥಿಯಾಗಿದ್ದಾರೆ ಎಂಬುದು ಜನಭಿಪ್ರಾಯವಾಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
ಇಂಡಿಯಾ ಟುಡೇ ಮತ್ತು ಕಾರ್ವಿ ಇನ್ ಸೈಟ್ ನಡೆಸಿದ ಸರ್ವೆಯಲ್ಲಿ ಈ ಮಾಹಿತಿ ತಿಳಿದು ಬಂದಿದ್ದು, ಪ್ರಧಾನಿ ಮೋದಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪೈಪೋಟಿ ನೀಡುವ ಪ್ರಬಲ ಅಭ್ಯರ್ಥಿಯಾಗಿದ್ದಾರೆ ಎಂದು ತಿಳಿಸಿದೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ 286 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.
ಇನ್ನೂ ಮೋದಿ ಘೋಷಣೆಯಂತೆ ದೇಶದಲ್ಲಿ ಅಚ್ಚೇ ದಿನ್ ಇದೆಯೇ ಎಂಬ ಪ್ರಶ್ನೆಗೆ ಶೇ.40 ರಷ್ಟು ಮಂದಿ ಇದೆ ಎಂದು, ಶೇ.31 ರಷ್ಟು ಮಂದಿ ಇಲ್ಲ ಎಂದು ಹೇಳಿದ್ದರೇ. ಶೇ.22 ರಷ್ಟು ಮಂದಿ ಅದೇ ಪರಿಸ್ಥಿತಿ ಮುಂದುವರಿದಿದೆ ಎಂದು ಚುನಾವಣಾ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.