ಪಠಾಣ್ ಕೋಟ್ ದಾಳಿ: 6 ಅಪರಿಚತರ ವಿರುದ್ಧ ಎಫ್ಐಆರ್ ದಾಖಲು 
ದೇಶ

ಪಠಾಣ್ ಕೋಟ್ ದಾಳಿ: 6 ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲು

ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 6 ಅಪರಿಚಿತರ ವಿರುದ್ಧ ಪಾಕಿಸ್ತಾನ ಉಗ್ರ ನಿಗ್ರಹ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ...

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 6 ಅಪರಿಚಿತರ ವಿರುದ್ಧ  ಪಾಕಿಸ್ತಾನ ಉಗ್ರ ನಿಗ್ರಹ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ.
ಈಗಾಗಲೇ ದಾಳಿ ಕುರಿತಂತೆ 6 ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಪಾಕಿಸ್ತಾನ ಉಗ್ರ ನಿಗ್ರಹ ತಂಡವು ಇದೀಗ ದಾಳಿಗೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿರುವ ಜೈ-ಇ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಜೂದ್ ಅಜರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಾಧ್ಯತೆಗಳಿರುವುದಾಗಿ ಹೇಳಲಾಗುತ್ತಿದೆ. 

ಪಠಾಣ್ ಕೋಟ್ ದಾಳಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ದಾಳಿಯಲ್ಲಿ ಮಸೂದ್ ಅಜರ್ ಪ್ರಮುಖ ಕೈವಾಡವಿರುವುದಾಗಿ ಹೇಳುತ್ತಿದ್ದು, ಈ ಕುರಿತಂತೆ ಮಸೂದ್ ಅಜರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಜನವರಿ 2 ರಂದು ಪಠಾಣ್ ಕೋಟ್ ವಾಯುನೆಲೆ ದಾಳಿ ಮಾಡಿದ್ದ ಉಗ್ರರು, 7 ಯೋಧರನ್ನು ಬಲಿ ತೆಗೆದುಕೊಂಡಿದ್ದರು. ದಾಳಿ ಕುರಿತಂತೆ ತನಿಖೆ ನಡೆಸಿದ್ದ ಭಾರತೀಯ ತನಿಖಾ ತಂಡ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿರುವುದಾಗಿ ಶಂಕೆ ವ್ಯಕ್ತಪಡಿಸಿ ಉಗ್ರರು ಬಳಸಿದ್ದ ಫೋನ್ ನಂಬರ್ ಹಾಗೂ ಇನ್ನಿತರೆ ಪ್ರಮುಖ ಸಾಕ್ಷ್ಯಾಧಾರಗಳನ್ನು ಪಾಕಿಸ್ತಾನಕ್ಕೆ ನೀಡಿತ್ತು. ಇದಕ್ಕೆ ಉತ್ತರಿಸಿದ್ದ ಪಾಕಿಸ್ತಾನ ಇದು ಪಾಕಿಸ್ತಾನದ ನಂಬರ್ ಗಳಲ್ಲ, ನೋಂದಣಿಯಾಗಿರದ ನಂಬರ್ ಗಳಿವು. ದಾಳಿ ಕುರಿತಂತೆ ಮತ್ತಷ್ಟು ಸಾಕ್ಷ್ಯಾಧಾರಗಳ ಅಗತ್ಯವಿದೆ ಎಂದು ಹೇಳಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT