ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಕಿಡಿಗೇಡಿಗಳು ಉಗ್ರ ಅಪ್ಜಲ್ ಗುರು ಹಾಗೂ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ.
ಶ್ರೀನಗರದ ಜಾಮಾ ಮಸೀದಿ ಬಳಿ ಅಪ್ಜಲ್ ಗುರು ಪರ ಘೋಷಣೆಗಳನ್ನು ಕೂಗಿದ ಬೆಂಬಲಿಗರು ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಅಪ್ಜಲ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಪ್ಜಲ್ ಗುರು ಘೋಷಣೆ ಕೂಗಿದ ವಿದ್ಯಾರ್ಥಿಗಳಿಗಾಗಿ ಧನ್ಯವಾದ ತಿಳಿಸುವ ಬ್ಯಾನರ್ ಪ್ರದರ್ಶಿಸಿದ್ದಾರೆ.
ಈ ವೇಳೆ ಪುಂಡರ ಗುಂಪು ಶ್ರೀನಗರ ಪೊಲೀಸರ ಮೇಲೆ ಕಲ್ಲುಗಳನ್ನು ತೂರಿದ್ದಾರೆ. ಕಿಡಿಗೇಡಿಗಳನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.