ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪ್ರಸಾರ ಭಾರತಿ ಮಂಡಳಿ ಸದಸ್ಯೆಯಾಗಿ ನಟಿ ಕಾಜೋಲ್ ನೇಮಕ

ಬಾಲಿವುಡ್ ನಟಿ ಕಾಜೋಲ್ ಅವರನ್ನು ಪ್ರಸಾರ ಭಾರತಿ ಮಂಡಳಿಯ ಅರೆಕಾಲಿಕ ಸದಸ್ಯೆಯಾಗಿ ನೇಮಕ...

ನಟಿ ಕಾಜೋಲ್
Mainashree
Updated On : 20 Feb 2016, 12:32 pm
ನವದೆಹಲಿ: ಬಾಲಿವುಡ್ ನಟಿ ಕಾಜೋಲ್ ಅವರನ್ನು ಪ್ರಸಾರ ಭಾರತಿ ಮಂಡಳಿಯ ಅರೆಕಾಲಿಕ ಸದಸ್ಯೆಯಾಗಿ ನೇಮಕ ಮಾಡಲಾಗಿದೆ.
2021ರವರೆಗೂ ಕಾಜೋಲ್ ಅವರು ಕಾರ್ಯ ನಿರ್ವಹಿಸಲಿದ್ದಾರೆ ಹಾಗೂ ಫೆಬ್ರವರಿ 24ರಂದು ನಡೆಯಲಿರುವ ಪ್ರಸಾರ ಭಾರತಿಯ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಈ ಸಭೆಯಲ್ಲಿ ದೂರದರ್ಶನ ಮತ್ತು ಆಕಾಶವಾಣಿ ಮಹಾನಿರ್ದೇಶಕರ ನೇಮಕಾತಿ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪ್ರಸಾರ ಭಾರತಿ ನಿಯಮಾವಳಿ ಪ್ರಕಾರ ಆರು ಮಂದಿ ಅರೆಕಾಲಿಕ ಸದಸ್ಯರನ್ನು ನೇಮಕ ಮಾಡಿಕೊಳ್ಳುವ ಅವಕಾಶವಿದೆ. ಇದೇ ವೇಳೆ ಆನ್ ಲೈನ್ ಮೀಡಿಯಾ ಕಂಪನಿ ಮುಖ್ಯಸ್ಥರಾದ ಶಶಿಶೇಖರ್ ವೆಂಪತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments