ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೇಶ ವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಲುಕೌಟ್ ನೋಟಿಸ್ ಜಾರಿ

ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಫೆ. 9ರಂದು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಶಂಕಿಸಲಾಗುವ ಮೂವರು ವಿದ್ಯಾರ್ಥಿಗಳಿಗೆ ದೆಹಲಿ...

ಜೆಎನ್ ಯು ಪ್ರವೇಶ ದ್ವಾರದಲ್ಲಿ ಕಾರ್ಯ ನಿರತರಾಗಿರುವ ಪೊಲೀಸರು
Rashmi Kasaragodu
Updated On : 20 Feb 2016, 1:35 am
ನವದೆಹಲಿ: ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಫೆ. 9ರಂದು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಶಂಕಿಸಲಾಗುವ ಮೂವರು ವಿದ್ಯಾರ್ಥಿಗಳಿಗೆ ದೆಹಲಿ ಪೊಲೀಸರು ಶನಿವಾರ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ.
ಇದೀಗ ತಲೆ ಮರೆಸಿಕೊಂಡಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ಇಮಿಗ್ರೇಷನ್ ಚೆಕ್‌ಪೋಸ್ಟ್‌ಗಳಲ್ಲಿನ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಈ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಆ ವಿದ್ಯಾರ್ಥಿಗಳ ಆಪ್ತರನ್ನು ವಿಚಾರಣೆಗೊಳಪಡಿಸಿದೆ. ಅಷ್ಟೇ ಅಲ್ಲದೆ ಈ ವಿದ್ಯಾರ್ಥಿಗಳ ಮೊಬೈಲ್ ಫೋನ್‌ನ ಕರೆಗಳ ವಿವರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

Advertisement

Advertisement

ಈಗಾಗಲೇ ಪೊಲೀಸರು ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿರಿಸಿದ್ದಾರೆ. ಈಗಾಗಲೇ ಪೊಲೀಸರು ಈ ವಿಷಯಕ್ಕೆ ಸಂಬಂಧಿಸಿದಂತೆ 17 ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments