ಸ್ಯಾಮ್ ಪಿತ್ರೋಡಾ 
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸ್ಯಾಮ್ ಪಿತ್ರೋಡಗೆ ಜಾಮೀನು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಅನ್ವಯ ದೆಹಲಿ ಕೋರ್ಟ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇತರ ಮೂವರಿಗೆ ವಿಚಾರಣೆಗೆ...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಅನ್ವಯ ದೆಹಲಿ ಕೋರ್ಟ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇತರ ಮೂವರಿಗೆ ವಿಚಾರಣೆಗೆ ಖುದ್ದು ಹಾಜರಿಯಿಂದ ವಿನಾಯ್ತಿ ನೀಡಿದೆ.

ಶನಿವಾರ ನಡೆದ ವಿಚಾರಣೆಗೆ ಪ್ರಕರಣದ ಆರೋಪಿಗಳು ಖುದ್ದು ಹಾಜರಾಗಲಿಲ್ಲ. ಮತ್ತೊಬ್ಬ ಆರೋಪಿ ಸ್ಯಾಮ್ ಪಿತ್ರೋಡ ಅವರಿಗೂ ನ್ಯಾಯಾಲಯ ಶನಿವಾರ ಷರತ್ತು ಬದ್ಧ ಜಾಮೀನು ನೀಡಿದೆ. 50,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಭದ್ರತಾ ಖಾತರಿ ನೀಡುವಂತೆ ನ್ಯಾಯಾಲಯವು ಪಿತ್ರೋಡಾ ಅವರಿಗೆ ಸೂಚಿಸಿದೆ.

2015ರ ಡಿ. 19ರಂದು ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿನ ಪಟಿಯಾಲ ಹೌಸ್ ಜಿಲ್ಲಾ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಬಳಿಕ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿ, ವಿಚಾರಣೆಯನ್ನು ಫೆ. 20ಕ್ಕೆ ಮುಂದೂಡಿತ್ತು. ಮಾರ್ಚ್ 21ರಂದು ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.

ಕಾಂಗ್ರೆಸ್ ಖಜಾಂಚಿ ಮೋತಿಲಾಲ್ ವೋರಾ, ಗಾಂಧಿ ಕುಟುಂಬದ ಸ್ನೇಹಿತ ಸುಮನ್ ದುಬೇ ಮತ್ತು ಆಸ್ಕರ್ ಫರ್ನಾಂಡಿಸ್ ಅವರಿಗೆ ಕೋರ್ಟ್ ಗೆ ಖುದ್ದು ಹಾಜರಾಗುವುದರಿಂದ ನ್ಯಾಯಾಲಯ ವಿನಾಯಿತಿ ನೀಡಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT