ಪಠಾಣ್ ಕೋಟ್ ವಾಯು ನೆಲೆ 
ದೇಶ

ಪಠಾಣ್ ಕೋಟ್ ದಾಳಿ: ಮಾರ್ಚ್ ನಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಪಾಕ್ ತನಿಖಾ ತಂಡ

ಪಠಾಣ್ ಕೋಟ್ ವಾಯು ನೆಲೆಯಲ್ಲಿ ನಡೆದ ದಾಳಿ ಪ್ರಕರಣದ ಸಂಬಂಧ ಸಾಕ್ಷ್ಯಗಳನ್ನು ಸಂಗ್ರಹಿಸಲು ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಲಿದೆ.

ಇಸ್ಲಾಮಾಬಾದ್: ಪಠಾಣ್ ಕೋಟ್ ವಾಯು ನೆಲೆಯಲ್ಲಿ ನಡೆದ ದಾಳಿ ಪ್ರಕರಣದ ಸಂಬಂಧ ಸಾಕ್ಷ್ಯಗಳನ್ನು ಸಂಗ್ರಹಿಸಲು ಪಾಕಿಸ್ತಾನ ತನಿಖಾ ತಂಡ ಮಾರ್ಚ್ ನಲ್ಲಿ ಭಾರತಕ್ಕೆ ಭೇಟಿ ನೀಡಲಿದೆ.
ವಾಯುನೆಲೆ ಮೇಲಿನ ದಾಳಿಯಲ್ಲಿ ಜೈಶ್-ಇ- ಮೊಹಮ್ಮದ್ ಉಗ್ರ ಸಂಘಟನೆ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸಾಕ್ಷ್ಯ ಸಂಗ್ರಹಿಸಲು ಪಾಕ್ ತನಿಖಾ ತಂಡ ಭಾರತಕ್ಕೆ ಆಗಮಿಸುತ್ತಿದೆ. ಪಾಕ್ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಲಿರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಹಿರಿಯ ರಾಯಭಾರಿಯೊಬ್ಬರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ. 
ಪಠಾಣ್ ಕೋಟ್ ದಾಳಿ ಬಗ್ಗೆ ತನಿಖೆ ನಡೆಸುತ್ತಿರುವ ಪಾಕ್ ತನಿಖಾ ತಂಡದ ಎಫ್ಐ ಆರ್ ನಲ್ಲಿ ಜೈಶ್- ಇ-ಮೊಹಮ್ಮದ್ ಉಗ್ರ ಸಂಘಟನೆ ಹೆಸರಿಲ್ಲ ಎಂಬ ವರದಿಗಳು ಪ್ರಕಟವಾಗಿವೆ. ಆದರೂ ಉಗ್ರ ಸಂಘಟನೆ ಕೈವಾಡದ ಬಗ್ಗೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಪಾಕ್ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಲಿದ್ದು ಎನ್ಐಎ ಅಧಿಕಾರಿಗಳನ್ನು ಭೇಟಿ ಮಾಡಲಿದೆ ಎಂದು ತಿಳಿದುಬಂದಿದೆ. ಪಾಕಿಸ್ತಾನ ತನಿಖಾ ತಂಡಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭಾರತದ ರಾಯಭಾರಿ ಕಚೇರಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ