ಮಥುರಾ: ಜವಾಹರ್ ಲಾಲ್ ನೆಹರು ವಿವಿಯಲ್ಲಿ ಕೆಲವು ವಿದ್ಯಾರ್ಥಿಗಳು ದೇಶವಿರೋಧಿ ಘೋಷಣೆ ಕೂಗಿರುವ ವಿಷಯದ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೌನವಹಿಸಿರುವುದುನ್ನು ಬಿಜೆಪಿ ಸಂಸದೆ ಸಾಧ್ವಿ ನಿರಂಜನ್ ಜ್ಯೋತಿ ಪ್ರಶ್ನಿಸಿದ್ದಾರೆ.
ಜೆಎನ್ ಯು ವಿದ್ಯಾರ್ಥಿಗಳು ದೇಶವಿರೋಧಿ ಘೋಷಣೆ ಕೂಗಿದರೂ ಸೋನಿಯಾ ಗಾಂಧಿ ಮೊಉನವಹಿಸಿರುವುದೇಕೆ, ಅವರ ಮೌನ ಹಲವು ಅನುಮಾನಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಸಾಧ್ವಿ ನಿರಂಜನ್ ಜ್ಯೋತಿ ಹೇಳಿದ್ದಾರೆ.
ದೇಶವಿರೋಧಿ ವಿದ್ಯಾರ್ಥಿಗಳನ್ನು ಬೆಂಬಲಿಸುತ್ತಿರುವುದಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧವೂ ಸಾಧ್ವಿ ನಿರಂಜನ್ ಜ್ಯೋತಿ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಆಗ್ರಹಿಸಿದ್ದಾರೆ. ದೇಶವನ್ನು ಒಡೆಯಲು ಯತ್ನಿಸುತ್ತಿರುವ ಕೆಲವರು ಆರ್ ಎಸ್ಎಸ್ ನ ದೇಶಭಕ್ತಿಯನ್ನು ಪ್ರಶ್ನಿಸುತ್ತಿದ್ದಾರೆ. ಆರ್ ಎಸ್ ಎಸ್ ನ ದೇಶ ಭಕ್ತಿ ಪ್ರಶ್ನಾತೀತವಾದದ್ದು ಎಂದಿದ್ದಾರೆ ಸಾಧ್ವಿ ನಿರಂಜನ್ ಜ್ಯೋತಿ.