ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಹೊರಗೆ ಪೊಲೀಸರ ಬಿಗಿ ಭದ್ರತೆಯಲ್ಲಿ ಕನಯ್ಯಾ ಕುಮಾರ್ 
ದೇಶ

ಜೆಎನ್ ಯು ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಕನಯ್ಯಾ ಕುಟುಂಬ ಒತ್ತಾಯ

ದೇಶದ್ರೋಹದ ಆರೋಪ ಎದುರಿಸುತ್ತಿರುವ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ನ...

ನವದೆಹಲಿ: ದೇಶದ್ರೋಹದ ಆರೋಪ ಎದುರಿಸುತ್ತಿರುವ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ನ ಬಂಧನ ವಿಷಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕೆಂದು ಕುಟುಂಬ ಸದಸ್ಯರು ಒತ್ತಾಯಿಸಿದ್ದಾರೆ.

ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಕನಯ್ಯಾ ಮೇಲಿನ ದಾಳಿ ಕುರಿತು ಆತಂಕ ವ್ಯಕ್ತಪಡಿಸಿದ ಕನಯ್ಯಾ ಸೋದರ ಮಣಿಕಾಂತ್ ಸಿಂಗ್, ನನ್ನ ತಮ್ಮ ದೋಷಮುಕ್ತನಾಗಿ ಹೊರಗೆ ಬರುತ್ತಾನೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

ಇಡೀ ಪ್ರಕರಣ ಒಂದು ಸಿನಿಮಾ ರೀತಿ ಇದೆ.ಅಂದು ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದ ವಿಡಿಯೋವನ್ನು ನಕಲಿ ಮಾಡಿ ಕನಯ್ಯಾ ದೇಶದ್ರೋಹಿ ಎನ್ನುವಂತೆ ಬಿಂಬಿಸಲಾಗಿದೆ. ಪ್ರಕರಣದ ವಿಚಾರಣೆ ಮುಗಿದ ಬಳಿಕ ಅವನು ಸಂಪೂರ್ಣ ಆರೋಪಮುಕ್ತನಾಗಿ ಹೊರಗೆ ಬರುತ್ತಾನೆ ಎಂಬ ವಿಶ್ವಾಸವಿದೆ. ರಾಷ್ಟ್ರೀಯತೆ ಎಂಬುದು ಅವನ ರಕ್ತದಲ್ಲಿದೆ ಎಂದರು.

ಜೆಎನ್ ಯುದ ಬೆಳವಣಿಗೆ ಬಗ್ಗೆ ಪ್ರಧಾನಿಯವರು ಅಸಮಾಧಾನಗೊಂಡಿದ್ದಾರೆ ಎಂದು ಪತ್ರಿಕೆಯಲ್ಲಿ ಓದಿದೆ. ಅವರು ಈ ವಿವಾದದ ಬಗ್ಗೆ ಇದುವರೆಗೆ ಏನೂ ಪ್ರತಿಕ್ರಿಯೆ ನೀಡಿಲ್ಲ. ಪ್ರಧಾನಿಯವರು ಬಡಕುಟುಂಬದಿಂದ ಬಂದವರು. ಅವರಿಗೆ ಬಡವರ, ದೀನರ ನೋವು ಅರ್ಥವಾಗುತ್ತದೆ ಎಂದು ಭಾವಿಸಿದ್ದೇವೆ. ಅವರು ಮೌನ ಮುರಿದು ಘಟನೆ ಬಗ್ಗೆ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel