ದೇಶ

ಪ್ಯಾಂಪೋರ್: ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯ, 3 ಉಗ್ರರ ಹತ್ಯೆ

Lingaraj Badiger
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನ ಸರ್ಕಾರಿ ಕಟ್ಟಡವೊಂದರಲ್ಲಿ ಅಡಗಿದ್ದ ಶಂಕಿತ ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರ ವಿರುದ್ಧದ ಕಾರ್ಯಾಚರಣೆ ಸೋಮವಾರ ಅಂತ್ಯಗೊಂಡಿದ್ದು, ಸತತ 48 ಗಂಟೆಗಳ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳು ಖಚಿತಪಡಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಮೂವರು ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.ಸದ್ಯ ಕಟ್ಟಡದಲ್ಲಿ ಯಾವುದೇ ಉಗ್ರರಿಲ್ಲ ಎಂಬುದನ್ನು ಸೇನೆ ಖಚಿತಪಡಿಸಿಕೊಂಡಿರುವುದಾಗಿ ಮೇಜರ್ ಜನರಲ್ ಅರವಿಂದ್ ದತ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಜೆಕೆಇಡಿಐ ಸರ್ಕಾರಿ ಕಟ್ಟಡದಲ್ಲಿ ಅಡಗಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆರ್ಮಿ ಕ್ಯಾಪ್ಟನ್ ಪವನ್ ಕುಮಾರ್ ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ 14 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ನಾಗರಿಕ ಸಹ ಸಾವನ್ನಪ್ಪಿದ್ದಾನೆ.
ಭಾನುವಾರ ಮತ್ತು ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.
SCROLL FOR NEXT