ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೇಂದ್ರ ಬಜೆಟ್ ಅಧಿವೇಶನ: ಸರ್ಕಾರದ ವಿರುದ್ಧ ದಾಳಿಗೆ ಪ್ರತಿಪಕ್ಷ ಸಜ್ಜು

ಕೇಂದ್ರ ಬಜೆಟ್ ಅಧಿವೇಶನ ಮಂಗಳವಾರ ಆರಂಭವಾಗಲಿದ್ದು, ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ದಾಳಿ ಮಾಡಲು ಪ್ರತಿಪಕ್ಷಗಳು ಸಜ್ಜಾಗಿವೆ...

ಕೇಂದ್ರ ಬಜೆಟ್ ಅಧಿವೇಶನ: ಸರ್ಕಾರದ ವಿರುದ್ಧ ದಾಳಿಗೆ ಪ್ರತಿಪಕ್ಷ ಸಜ್ಜು
Manjula VN
Updated On : 23 Feb 2016, 9:08 am
ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನ ಮಂಗಳವಾರ ಆರಂಭವಾಗಲಿದ್ದು, ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ದಾಳಿ ಮಾಡಲು ಪ್ರತಿಪಕ್ಷಗಳು ಸಜ್ಜಾಗಿವೆ. 
ಕಳೆದ ಅಧಿವೇಶನದಲ್ಲಿಯೂ ಜಿಎಸ್ ಟಿ ಮಸೂದೆಗೆ ಅಂಗೀಕಾರ ದೊರೆತಿರಲಿಲ್ಲ. ಹೀಗಾಗಿ ಸುಗಮ ಕಲಾಪ ನಡೆಸಿ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಸಂವಿಧಾನ ತಿದ್ದುಪಡಿ ಮಸೂದೆಗೆ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆಯುವ ಉಮೇದಿನಲ್ಲಿ ಎನ್ ಡಿಎ ಸರ್ಕಾರ ಇದ್ದು, ಪ್ರತಿಪಕ್ಷಗಳು ಸರ್ಕಾರದ ಮೇಲೆ ದಾಳಿ ನಡೆಸಲು ಸಿದ್ಧವಾಗಿವೆ. 
ಹೈದರಾಬಾದ್ ವಿವಿ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಮತ್ತು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ ಯು)ದ ಬೆಳವಣಿಗೆಗಳು, ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಿ ವಾಪಸ್ಸು ಪಡೆದದ್ದು ಹಾಗೂ ಹೊತ್ತಿ ಉರಿಯುತ್ತಿರುವ ಜಾಟ್ ಸಮುದಾಯದ ಹೋರಾಟಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನದಲ್ಲಿವೆ. ಇದಲ್ಲದೆ, ಬಿಜೆಪಿಯ ಕೆಲ ನಾಯಕರ ಉದ್ರೇಕಕಾರಿ ಹೇಳಿಕೆಗಳನ್ನಿಡಿದು ಪ್ರತಿಪಕ್ಷಗಳು ಸರ್ಕಾರದ ಮೇಲೆ ದಾಳಿ ಮಾಡಲು ಸಿದ್ಧವಾಗಿವೆ. 

Advertisement

Advertisement

ಬಜೆಟ್ ಅಧಿವೇಶನ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಅವರು, ಆಡಳಿತಾರೂಢ ಮೋದಿ ಸರ್ಕಾರ ಗ್ರಹಿಕೆಯ ಸಮತೋಲನವನ್ನು ಕಳೆದುಕೊಂಡಂತಿದೆ ಎಂದು ಹೇಳಿದ್ದಾರೆ. 
ನಿನ್ನೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಿದ ಬಳಿಕ ಮಾತನಾಡಿರುವ ಅವರು, ಸಂಸತ್ತು ಕಲಾಪ ಸರಿಯಾಗಿ ನಡೆಯುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ ಕೆಲಸ. ಆರ್ ಎಸ್ಎಸ್ ತನ್ನ ಮಹಾಪಾತಕ ಅಜೆಂಡಾ ಇಂದು ಶೈಕ್ಷಣಿಕ ಸಂಸ್ಥೆಗಳು ಗುರಿಯಾಗುವಂತೆ ಮಾಡಿದೆ. ಅಲ್ಲದೆ, ತನ್ನ ಸಿದ್ಧಾಂತವನ್ನು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಮೇಲೆ ಹೇರಲು ಪ್ರಯತ್ನಿಸುತ್ತಿದೆ. ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement