ದೇಶ

ಕನ್ಹಯ್ಯರಿಂದ ತನಿಖೆ ಮೇಲೆ ಪ್ರಭಾವ ಸಾಧ್ಯತೆ, ಹೀಗಾಗಿ ಜಾಮೀನಿಗೆ ವಿರೋಧ: ಬಸ್ಸಿ

Lingaraj Badiger
ನವದೆಹಲಿ: ದೇಶ ದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಜಾಮೀನಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಂಗಳವಾರ ಕೋರ್ಟ್ ನಲ್ಲಿ ಉಲ್ಟಾ ಹೊಡೆದಿದ್ದಾರೆ. 
ಈ ಹಿಂದೆ ಕನ್ಹಯ್ಯ ಕುಮಾರ್ ಜಾಮೀನಿಗೆ ವಿರೋಧ ವ್ಯಕ್ತಪಡಿಸುವುದಿಲ್ಲ ಎಂದಿದ್ದ ದೆಹಲಿ ಪೊಲೀಸರು ಇಂದು ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್. ಬಸ್ಸಿ ಅವರು, ಕನ್ಹಯ್ಯ ಕುಮಾರ್ ಅವರು ಪ್ರಕರಣದ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ್ದೇವೆ ಎಂದು ಹೇಳಿದ್ದಾರೆ.
ಈಗ ಪರಿಸ್ಥಿತಿ ಬದಲಾಗಿದೆ. ಕನ್ಹಯ್ಯ ಒಂದು ವೇಳೆ ಜಾಮೀನಿನ ಮೇಲೆ ಹೊರ ಬಂದರೆ ತನಿಖೆ ಮೇಲೆ ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ನಾವು ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದೇವೆ ಎಂದು ಬಸ್ಸಿ ವರದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ದೇಶ ದ್ರೋಹದ ಆರೋಪ ಎದುರಿಸುತ್ತಿರುವ ಇತರೆ ಐವರು ವಿದ್ಯಾರ್ಥಿಗಳ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಬಸ್ಸಿ, ಪೊಲೀಸರಿಗೆ ಬೇಕಾಗಿರುವ ಆರೋಪಿಗಳ ಬಂಧನಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.
SCROLL FOR NEXT