ಅಮಿತ್ ಶಾ 
ದೇಶ

ದೇಶವಿರೋಧಿ ಘೋಷಣೆಗಳನ್ನು ಸಹಿಸಿಕೊಳ್ಳಬೇಕಾ?, ಸಂಸತ್ ನಲ್ಲಿ ಸ್ಪಷ್ಟಪಡಿಸಿ: ರಾಹುಲ್ ಗಾಂಧಿಗೆ ಅಮಿತ್ ಶಾ

ದೇಶವಿರೋಧಿ ಘೋಷಣೆಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಹಿಸಿಕೊಳ್ಳಬೇಕೆ ಎಂಬುದರ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರತಿಪಕ್ಷ ಸದಸ್ಯರು ಸಂಸತ್ ನಲ್ಲಿ ಸ್ಪಷ್ಟನೆ ನೀಡಬೇಕು

ನವದೆಹಲಿ: ದೇಶವಿರೋಧಿ ಘೋಷಣೆಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಹಿಸಿಕೊಳ್ಳಬೇಕೆ ಎಂಬುದರ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರತಿಪಕ್ಷ ಸದಸ್ಯರು ಸಂಸತ್ ನಲ್ಲಿ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗ್ರಹಿಸಿದ್ದಾರೆ.
ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ರಾಹುಲ್ ಗಾಂಧಿ ದೇಶವನ್ನು ಒಡೆಯುವ ಶಕ್ತಿಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೇಶವಿರೋಧಿ ಹೇಳಿಕೆಗಳನ್ನು ಸಹಿಸಬೇಕೋ ಬೇಡವೋ ಎಂಬುದರ ಬಗ್ಗೆ ಸಂಸತ್ ನಲ್ಲಿ ಚರ್ಚೆ ನಡೆಯುತ್ತಿದೆ. ಅಫ್ಜಲ್ ಗುರುವನ್ನು ಬೆಂಬಲಿಸಿ, ಭಾರತವನ್ನು ಒದೇಯುವುದಾಗಿ ಘೋಷಣೆ ಕೂಗಿದವರು ದೇಶದ್ರೋಹಿಗಳು ಹೌದೋ ಅಲ್ಲವೋ ಎಂದು ವಿಶೇಷವಾಗಿ ಕಾಂಗ್ರೆಸ್ ಗೆ ಕೇಳಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ. 
"ರಾಹುಲ್ ಗಾಂಧಿಯವರೇ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶವಿರೋಧಿಗಳನ್ನು ಬೆಂಬಲಿಸುವ ಮಟ್ಟಕ್ಕೆ ಇಳಿಯಬೇಡಿ, ಸಾವಿರಾರು ಹುತಾತ್ಮರಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ, ನೀವು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶವನ್ನು ಒಡೆಯುವವರಿಗೆ ಬೆಂಬಲ ಸೂಚಿಸುತ್ತಿದ್ದೀರಿ" ಎಂದು ಅಮಿತ್ ಶಾ ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!