ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ: ಮಾಯಾವತಿ ಹೇಳಿಕೆಗೆ ಸ್ಮೃತಿ ಇರಾನಿ ತಿರುಗೇಟು

ವಿದ್ಯಾರ್ಥಿಗಳಿಗೆ ದೇಶದಲ್ಲಿ ಸೂಕ್ತ ರಕ್ಷಣೆ ದೊರೆಯುತ್ತಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮಾಯಾವತಿ ಆರೋಪಕ್ಕೆ, ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ...

ಸ್ಮೃತಿ ಇರಾನಿ
Shilpa D
Updated On : 25 Feb 2016, 10:28 am

ನವದೆಹಲಿ: ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ರಾಜ್ಯ ಸಭೆಯಲ್ಲಿಯೂ ಪ್ರತಿಧ್ವನಿಸಿದೆ. ದಲಿತ ವಿದ್ಯಾರ್ಥಿಗಳಿಗೆ ದೇಶದಲ್ಲಿ ಸೂಕ್ತ ರಕ್ಷಣೆ ದೊರೆಯುತ್ತಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮಾಯಾವತಿ ಆರೋಪಕ್ಕೆ, ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ.
 
ದಲಿತ ವಿದ್ಯಾರ್ಥಿಗಳಿಗೆ ರಕ್ಷಣೆಯಿಲ್ಲ ಎನ್ನುವುದು ಕೇವಲ ಭ್ರಮೆ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿಯೂ ಎಲ್ಲರಿಗೂ ರಕ್ಷಣೆ ನೀಡಲಾಗಿದೆ. ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿಯೇ ನಡೆದಿದೆ ಎಂದು ಸಮರ್ಥಿಸಿಕೊಂಡರು.
 
ರಾಜ್ಯಸಭೆಯಲ್ಲಿ ಅಡಳಿತರೂಡ ಮತ್ತು ವಿಪಕ್ಷಗಳ ನಾಯಕರ ನಡುವೆ ನಡೆದ ಜಟಾಪಟಿ ಕೋಲಾಹಲ ಸೃಷ್ಟಿಸಿತ್ತು. ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದಳಾಗಿದ್ದೇನೆ. ಅನಗತ್ಯವಾಗಿ ಕೇಂದ್ರ ಸರಕಾರದ ವಿರುದ್ಧ ಆರೋಪ ಹೊರಿಸುವುದು ಸರಿಯಲ್ಲ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement