ಶಿಮ್ಲಾ: ಇಲ್ಲಿನ ಸೋಲನ್ ಜಿಲ್ಲೆಯಲ್ಲಿ ಗುರುವಾರ ಮುಸ್ಸಂಜೆ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. 45 ಜನರನ್ನು ಹೇರಿಕೊಂಡು ಬರುತ್ತಿದ್ದ ಖಾಸಗಿ ಬಸ್ ಚಾಂಬಿದಾರ್ ಪ್ರದೇಶದಲ್ಲಿ ಕಂದಕಕ್ಕೆ ಉರುಳಿ ಈ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ 26 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಹೆಚ್ಚಿನ ಮಾಹಿತಿಗಳು ಇನ್ನೂ ವರದಿಯಾಗಿಲ್ಲ.