ನವದೆಹಲಿ: ಜೆಎನ್ ಯು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ ಮೇಲೆ ವಕೀಲರು ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವುದರ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರಿಂದ ಪ್ರತಿಕ್ರಿಯೆ ಕೇಳಿದೆ.
ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಚೆಲಮೇಶ್ವರ್ ಹಾಗೂ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರಿಂದ ಪ್ರತಿಕ್ರಿಯೆ ಕೇಳಿದ್ದು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ನ್ನು ಥಳಿಸಿದ್ದ ಮೂವರು ವಕೀಲರಿಗೆ ನೊಟೀಸ್ ಜಾರಿ ಮಾಡಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಮದ್ಯಪ್ರವೇಶ ಮಾಡಿ, ಕಾನೂನನ್ನು ಕೈಗೆತ್ತಿಕೊಂಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ವಕೀಲರಾದ ವಿಕ್ರಂ ಸಿಂಗ್ ಚೌಹಾಣ್, ಯಶ್ ಪಾಲ್ ಸಿಂಗ್, ಓಂ ಶರ್ಮಾಗೆ ಕೋರ್ಟ್ ನೊಟೀಸ್ ಜಾರಿ ಮಾಡಿದೆ.