ಸುಬ್ರಮಣಿಯನ್ ಸ್ವಾಮಿ 
ದೇಶ

ಸುಬ್ರಮಣ್ಯಂ ಸ್ವಾಮಿ ವಿರುದ್ಧ ಪ್ರತಿಭಟನೆ, ಮೊಟ್ಟೆ, ಟಮೊಟೊ ಎಸೆತ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿಧಿ ದುರ್ಬಳಕೆ ಆರೋಪದ ಮೇಲೆ ಸೋನಿಯಾ, ರಾಹುಲ್ ಮತ್ತಿತರ ವಿರುದ್ಧ ದೂರು ದಾಖಲಿಸಿದ್ದನ್ನು ಖಂಡಿಸಿ ಉತ್ತರ ಪ್ರದೇಶದ ...

ಕಾನ್ಪುರ್‌: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿಧಿ ದುರ್ಬಳಕೆ ಆರೋಪದ ಮೇಲೆ ಸೋನಿಯಾ, ರಾಹುಲ್ ಮತ್ತಿತರ ವಿರುದ್ಧ ದೂರು ದಾಖಲಿಸಿದ್ದನ್ನು ಖಂಡಿಸಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಮಿ ಅವರಿಗೆ ಘೇರಾವ್ ಹಾಕಿದ್ದಾರೆ. ಸ್ವಾಮಿಯವರ ಕಾರಿನ ಮೇಲೆ ಮೊಟ್ಟೆ, ಟೊಮೆಟೊ ಎಸೆದು, ಮಸಿ ಚೆಲ್ಲಿ ಘೋಷಣೆ ಕೂಗಿದ್ದಾರೆ.

ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಕಾನ್ಪುರ್‌ದ ವಿಎಸ್‌‌ಎಸ್‌ಡಿ ಕಾಲೇಜ್‌ನಲ್ಲಿ ನಡೆಯುವ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದ ಸೆಮಿನಾರ್‌ನಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಈ ವೇಳೆ ಅವರ ಕಾರನ್ನು ಅಡ್ಡಗಟ್ಟಿದ ಕಾಂಗ್ರೆಸ್‌ ಕಾರ್ಯಕರ್ತರು ಅವರಿಗೆ ಕಪ್ಪು ಬಾವುಟ ತೋರಿಸಿದ್ದಾರೆ.


ಸ್ವಾಮಿ ವಿರುದ್ಧ ಘೋಷಣೆ ಕೂಗಿ ನಂತರ ಅವರ ಕಾರಿನ ಮೇಲೆ ಮಸಿ, ಮೊಟ್ಟೆ ಹಾಗೂ ಟೊಮೆಟೋ ಎಸೆದಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ಸಿಆರ್‌ಫಿ ಪಡೆ ಲಾಠಿ ಚಾರ್ಜ್‌ ಮಾಡಿದೆ. ಆದ್ರೂ ಕೈ ಕಾರ್ಯಕರ್ತರು ಇದನ್ನು ವಿರೋಧಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ