ಉಮ್ಮನ್ ಚಾಂಡಿ 
ದೇಶ

ಅಪಘಾತದಿಂದ ಕೇರಳ ಸಿಎಂ ಉಮ್ಮನ್ ಚಾಂಡಿ ಪಾರು

ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಕೇರಳ ಸಿಎಂ ಉಮ್ಮನ್ ಚಾಂಡಿ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ....

ಕೊಟ್ಟಾಯಂ: ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಕೇರಳ ಸಿಎಂ ಉಮ್ಮನ್ ಚಾಂಡಿ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.

ಕೇರಳದ ಕನಕರಿ ವೈಕೋಮ್- ಇಟ್ಟುಮನೋರ್ ರಸ್ತೆಯಲ್ಲಿ ಚಲಿಸುತ್ತಿದ್ದ ಒಮನ್ ಚಾಂಡಿ ಅವರ ಕಾರರು ಇದ್ದಕ್ಕಿದ್ದಂತೆ ಸ್ಕಿಡ್ ಆಗಿದೆ.  ಡ್ರೈವರ್ ಪಕ್ಕ ಮುಂದಿನ ಸೀಟಿನಲ್ಲಿ ಕುಳಿತಿದ್ದ ಚಾಂಡಿ ಅವರ ಗನ್ ಮ್ಯಾನ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ, ಹಿಂದಿನ ಸೀಟಿನಲ್ಲಿ ಕುಳಿತಿದ್ದ ಚಾಂಡಿ ಪಾರಾಗಿದ್ದಾರೆ.

ಕೋಜಿಕೋಡ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕಾರ್ಯಕ್ರಮ ಮುಗಿಸಿ ವಾಪಸ್ ಮನೆಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ.

ಅಪಘಾತಕ್ಕೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾರಿನ ಟೈರ್ ಪಂಚರ್ ಆಗಿ ಕಾರು ಚರಂಡಿಗೆ ಇಳಿದಿದೆಯೇ ಅಥವಾ ಚಾಲಕ ನಿದ್ದೆ ಮಂಪರಿನಲ್ಲಿ ಕಾರನ್ನು ಚರಂಡಿಗಿಳಿಸಿದ್ದಾನೆಯೇ ಎಂಬುದರ ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ.

ಘಟನೆ ನಂತರ ಚಾಂಡಿ ಪೈಲಟ್ ವಾಹನದಲ್ಲಿ ಮನೆಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ. ಇನ್ನು ತಾವು ಸೀಟ್ ಬೆಲ್ಟ್ ಹಾಕಿಕೊಂಡಿದ್ದರಿಂದ ತಮಗೆ ಯಾವುದೇ ಗಾಯಗಳಾಗಿಲ್ಲ ಎಂದು ಚಾಂಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ