ಉಮರ್ ಖಾಲಿದ್ 
ದೇಶ

ಜೆಎನ್ ಯು: ಉಮರ್, ಅನಿರ್ಬನ್ ಮತ್ತೊಂದು ದಿನ ಪೊಲೀಸ್ ಕಸ್ಟಡಿಗೆ

ದೆಹಲಿಯ ಜವಾಹಾರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಉಗ್ರ ಅಫ್ಜಲ್ ಗುರು ಪರ ಪ್ರತಿಭಟನಾ ಮೆರವಣಿಗೆಯನ್ನು...

ನವದೆಹಲಿ: ದೆಹಲಿಯ ಜವಾಹಾರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಉಗ್ರ ಅಫ್ಜಲ್ ಗುರು ಪರ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜೆಎನ್ ಯು ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಅವರನ್ನು ಮತ್ತೊಂದು ದಿನ ಪೊಲೀಸ್ ವಶಕ್ಕೆ ನೀಡಲಾಗಿದೆ. 
ಜೆಎನ್ ಯುನ ಆವರಣದಲ್ಲಿ ಭಾರತ ವಿರೋಧಿ ಘೋಷಣೆ ಕೂಗಿದ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸುತ್ತಿದ್ದಂತೆಯೇ ಪ್ರಮುಖ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಇನ್ನಿತರ ವಿದ್ಯಾರ್ಥಿಗಳು ತಲೆಮರೆಸಿಕೊಂಡಿದ್ದರು. ಫೆಬ್ರವರಿ 24ರಂದು ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ತಡರಾತ್ರಿ ದೆಹಲಿ ಪೊಲೀಸರ ಬಳಿ ಶರಣಾಗಿದ್ದರು. 
ಇಬ್ಬರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಬೇಕಾಗಿದೆ. ಹಾಗಾಗಿ, ಪೊಲೀಸ್ ಕಸ್ಟಡಿ ವಿಸ್ತರಿಸಿ ಎಂದು ದೆಹಲಿ ಪೊಲೀಸರು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ಮತ್ತೊಂದು ದಿನ ಇಬ್ಬರು ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಿದೆ.
ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಫೆ. 9ರಂದು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಶಂಕಿಸಿ ಉಮರ್ ಖಾಲೀದ್, ಅನಂತ್ ಪ್ರಕಾಶ್ ನಾರಾಯಣ್, ಅಶುತೋಷ್ ಕುಮಾರ್, ರಾಮನಾಗ ಮತ್ತು ಅನಿರ್ಬನ್ ಭಟ್ಟಾಚಾರ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ