ದೇಶ

ಉನ್ನತ ಶಿಕ್ಷಣಕ್ಕೆ ಹಣಕಾಸು ನೆರವು ಒದಗಿಸಲು ಹಣಕಾಸು ಸಂಸ್ಥೆಗಳ ಸ್ಥಾಪನೆ

Sumana Upadhyaya

ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ. ಅದಕ್ಕಾಗಿ  ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಪ್ರಕಟಿಸಿದೆ.

ಐಐಟಿಯಂಥ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರವು ಸಾವಿರ ಕೋಟಿ ರೂಪಾಯಿ ಮೂಲ ಬಂಡವಾಳದೊಂದಿಗೆ ಉನ್ನತ ಶಿಕ್ಷಣ ಸಾಲ ವಿತರಣಾ ಸಂಸ್ಥೆ (ಎಚ್‌ಇಎಫ್ಎ) ರಚನೆಗೆ ಸರ್ಕಾರ ನಿರ್ಣಯಿಸಿದೆ.

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ 62 ನವೋದಯ ವಿದ್ಯಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುತ್ತಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ನವೋದಯ ವಿದ್ಯಾಲಯಗಳಿಲ್ಲವೋ ಅಲ್ಲೆಲ್ಲ ಇನ್ನೆರಡು ವರ್ಷಗಳಲ್ಲಿ ಸ್ಥಾಪಿಸಲಾಗುತ್ತದೆ.

ಸರ್ವಶಿಕ್ಷಣ ಅಭಿಯಾನಕ್ಕೆ ಹಂಚಿಕೆಯಾಗುವ ಮೊತ್ತವನ್ನೂ ಹೆಚ್ಚಿಸುವುದಾಗಿ ಬಜೆಟ್‌ನಲ್ಲಿ ವಿತ್ತ ಸಚಿವರು ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ತಮ್ಮ ಅಂಕಪಟ್ಟಿ, ಡಿಗ್ರಿ ಸರ್ಟಿಫಿಕೇಟು, ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು 'ಡಿಜಿಟಲ್‌ ಡಿಪಾಸಿಟರಿ' ಸ್ಥಾಪಿಸುವುದಾಗಿ ಅರುಣ್‌ ಜೇಟ್ಲಿ ತಿಳಿಸಿದ್ದಾರೆ. 

SCROLL FOR NEXT