ಉತ್ತರಪ್ರದೇಶದಲ್ಲಿ ಅಪಘಾತ (ಸಂಗ್ರಹ ಚಿತ್ರ) 
ದೇಶ

ಉತ್ತರಪ್ರದೇಶ: ಜೀಪ್ ಗೆ ಬಸ್ ಡಿಕ್ಕಿ; 12 ಯಾತ್ರಾರ್ಥಿಗಳ ಸಾವು

ಯಾತ್ರಾರ್ಥಿಗಳನ್ನು ಹೊತ್ತಿದ್ದ ಜೀಪ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ ನಲ್ಲಿದ್ದ 12 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ಉತ್ತರಪ್ರದೇಶದ ಬಲರಾಮ್ ಪುರದಲ್ಲಿ ನಡೆದಿದೆ..

ಲಖನೌ: ಯಾತ್ರಾರ್ಥಿಗಳನ್ನು ಹೊತ್ತಿದ್ದ ಜೀಪ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ ನಲ್ಲಿದ್ದ 12 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ಉತ್ತರಪ್ರದೇಶದ ಬಲರಾಮ್ ಪುರದಲ್ಲಿ ನಡೆದಿದೆ.

ನೇಪಾಳದಿಂದ ಯಾತ್ರೆ ಮುಗಿಸಿ ವಾಪಾಸಾಗುತ್ತಿದ್ದ ಯಾತ್ರಿಗಳ ಜೀಪ್‌ಗೆ ಬಲರಾಮ್ ಪುರದ ಬಳಿ ಇರುವ ತುಳಿಸಿಪುರ ಎಂಬಲ್ಲಿ ವಿದೇಶಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್‌ ಮುಖಾಮುಖಿ ಡಿಕ್ಕಿ  ಹೊಡೆದಿದೆ. ಪರಿಣಾಮವಾಗಿ ಜೀಪ್‌ನಲ್ಲಿದ್ದ ಎಲ್ಲಾ 12 ಮಂದಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಅಲ್ಲದೆ ಬಸ್‌ನಲ್ಲಿದ್ದ 5 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಟ್ಟ ಮಂಜು ಕವಿದಿದ್ದ ಕಾರಣ ರಸ್ತೆ ಸರಿಯಾಗಿ ಕಾಣಿಸುತ್ತಿರದೇ ಇದ್ದುದೇ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಬಸ್ ನಲ್ಲಿ ಸುಮಾರು ಚೀನಾದ ಪ್ರಜೆಗಳು ಸೇರಿದಂತೆ 24ಕ್ಕೂ ಅಧಿಕ  ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಾರಣಾಸಿಯಿಂದ ಸುಮಾರು 13 ಕಿ.ಮೀ ದೂರದಲ್ಲಿರುವ ಸಾರಾನಾಥದಿಂದ ಚೀನಾ ಪ್ರವಾಸಿಗರು ವಾಪಸಾಗುತ್ತಿದ್ದರು. ಬಸ್ ಚಾಲಕನನ್ನು  ಹೊರತುಪಡಿಸಿ ಬಸ್ ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!