ಎಲ್‍ಪಿಜಿ 
ದೇಶ

ಸಬ್ಸಿಡಿಯೇತರ ಎಲ್‍ಪಿಜಿ ದರ ಹೆಚ್ಚಳ

ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಉತ್ಪನ್ನಗಳ ಕಂಪನಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ಶುಕ್ರವಾರ ಸಬ್ಸಿಡಿಯೇತರ ಅಡುಗೆ ಅನಿಲ ಪ್ರತಿ ಸಿಲಿಂಡರ್...

ನವದಹೆಲಿ: ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಉತ್ಪನ್ನಗಳ ಕಂಪನಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ಶುಕ್ರವಾರ ಸಬ್ಸಿಡಿಯೇತರ ಅಡುಗೆ ಅನಿಲ ಪ್ರತಿ ಸಿಲಿಂಡರ್ ದರವನ್ನು ರು.50ಕ್ಕೆ ಹೆಚ್ಚಿಸಿದೆ. ಹೊಸ ದರ ಶುಕ್ರವಾರದಿಂದಲೇ ಚಾಲ್ತಿಗೆ ಬಂದಿದೆ.

ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಸಬ್ಸಿಡಿಯೇತರ ಅನಿಲ ದರ ಹೆಚ್ಚಳವಾಗಿದೆ. ಈ ಹಿಂದೆ ನವೆಂಬರ್‍ನಲ್ಲಿ ರು.60 ಹೆಚ್ಚಿಸಲಾಗಿತ್ತು. ವಾರ್ಷಿಕ 10 ಲಕ್ಷ ಆದಾಯ ಹೊಂದಿರುವ ಕುಟುಂಬಗಳಿಗೆ ಶುಕ್ರವಾರದಿಂದಲೇ ಸಬ್ಸಿಡಿ ಸ್ಥಗಿತಗೊಳಿಸಲಾಗಿದೆ.

ವಿಮಾನ ಇಂಧನ ದರ ಕಡಿತ: ಮತ್ತೊಂದು ಕಡೆ ಕೇಂದ್ರ ಸರ್ಕಾರ ವಿಮಾನ ಇಂಧನ ದರವನ್ನು ಕಡಿತಗೊಳಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಗಣನೀಯ ಇಳಿಮುಖ ಕಾಣುತ್ತಿರುವುದರಿಂದ ಪ್ರತಿ ಕಿಲೋ ಲೀಟರ್ ದರ (ದೆಹಲಿಯಲ್ಲಿ)ವನ್ನು ರು.44,320.32 ರಿಂದ ರು.39,892.32ಕ್ಕೆ ಇಳಿಸಿದೆ. ವಿಮಾನ ಇಂಧನ ದರ ಇಳಿಯುತ್ತಿದ್ದಂತೆ ವಿಮಾನಯಾನ ಕಂಪನಿಗಳ ಷೇರು ದರಗಳು ಏರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT