ದೇಶ

ಉಗ್ರರ ದಾಳಿಯ ಬಳಿಕ ಪಾಕ್‌ನೊಂದಿಗೆ ಮಾತುಕತೆ ನಡೆಸುವ ಬಗ್ಗೆ ಭಾರತ ಚಿಂತನೆ

Lingaraj Badiger
ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ನಡೆಸುವ ಬಗ್ಗೆ ಭಾರತ ಚಿಂತನೆ ನಡೆಸುತ್ತಿದೆ.
ಜನವರಿ 15ಕ್ಕೆ ಇಸ್ಲಾಮಾಬಾದ್‌ನಲ್ಲಿ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ನಿಗದಿಯಾಗಿದ್ದು, ದ್ವಿಪಕ್ಷೀಯ ಮಾತುಕತೆಗಾಗಿ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಜನವರಿ 14ರಂದು ಪಾಕಿಸ್ತಾನಕ್ಕೆ ಪ್ರಯಾಣ ಮಾಡಬೇಕಿದೆ.
ಪಠಾಣ್‌ಕೋಟ್ ಉಗ್ರರ ದಾಳಿಯ ಬಳಿಕ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕೋ ಅಥವಾ ಬೇಡ ಎಂಬುದರ ಬಗ್ಗೆ ಭಾರತ ಸರ್ಕಾರ ಚಿಂತನೆ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಮಧ್ಯೆ, ಇಸ್ಲಾಮಾಬಾದ್ ಸಭೆ ಮುಂದೂಡಲಾಗುತ್ತಿದೆ ಮತ್ತು ಪಾಕಿಸ್ತಾನಿ ಉಗ್ರರು ಪಠಾಣ್‌ಕೋಟ್ ವಾಯುನೆಲೆ ಮೇಲೆ ದಾಳಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿತ್ತು.
SCROLL FOR NEXT