ಎನ್ ಕೌಂಟರ್ ಅಂತ್ಯಗೊಳ್ಳಲು ಸಮಯಬೇಕು: ಸೇನಾಧಿಕಾರಿ 
ದೇಶ

ಎನ್ ಕೌಂಟರ್ ಅಂತ್ಯಗೊಳ್ಳಲು ಸಮಯಬೇಕು: ಸೇನಾಧಿಕಾರಿ

ಪಠಾಣ್ ಕೋಟ್ ಸೇನಾ ವಾಯುನೆಲೆಯಲ್ಲಿ ನಡೆಯುತ್ತಿರುವ ಉಗ್ರ ವಿರುದ್ಧ ಎನ್ ಕೌಂಟರ್ ಅಂತ್ಯಗೊಳ್ಳಲು ಕಾಲಾವಕಾಶಬೇಕು ಎಂದು ಸೇನಾಧಿಕಾರಿಗಳು ಸೋಮವಾರ ಹೇಳಿದ್ದಾರೆ...

ಪಠಾಣ್ ಕೋಟ್: ಪಠಾಣ್ ಕೋಟ್ ಸೇನಾ ವಾಯುನೆಲೆಯಲ್ಲಿ ನಡೆಯುತ್ತಿರುವ ಉಗ್ರ ವಿರುದ್ಧ ಎನ್ ಕೌಂಟರ್ ಅಂತ್ಯಗೊಳ್ಳಲು ಕಾಲಾವಕಾಶಬೇಕು ಎಂದು ಸೇನಾಧಿಕಾರಿಗಳು ಸೋಮವಾರ ಹೇಳಿದ್ದಾರೆ. 
ವಾಯುನೆಲೆ ಮೇಲಿನ ಉಗ್ರರ ದಾಳಿ ಕುರಿತಂತೆ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ವಾಯುಸೇನೆ ಹಾಗೂ ಎನ್ಎಸ್ ಜಿ ಮುಖ್ಯಸ್ಥರು ಉಗ್ರರ ವಿರುದ್ಧ 57 ಗಂಟೆಗಳಿಂದ ಕಾರ್ಯಾಚರಣೆ ಪ್ರಗತಿಯಲ್ಲಿಗೆ. ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಆದರೆ, ಎನ್ ಕೌಂಟರ್ ಅಂತ್ಯಗೊಳ್ಳಲು ಕಾಲಾವಕಾಶಬೇಕಿದೆ ಎಂದು ಹೇಳಿದ್ದಾರೆ. 
ಪ್ರಸ್ತುತ ಇಬ್ಬರು ಉಗ್ರರು ಅಡಗಿಕುಳಿತಿರುವುದಾಗಿ ಶಂಕೆಗಳು ಮೂಡಿದ್ದು, ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ. ಕಾರ್ಯಾಚರಣೆ ಸರಿಯಾದ ರೀತಿಯಲ್ಲಿ ಸಾಗುತ್ತಿದೆ. ಕಾರ್ಯಾಚರಣೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಏರ್ ಬೇಸ್ ನೆಲೆಯಲ್ಲಿರುವ ಆಸ್ಪಿಪಾಸ್ತಿಗಳಿಗೆ ಹಾನಿಯಾಗದಂತೆ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ವಾಯುನೆಲೆಯಲ್ಲಿ ಹಲವು ಕುಟುಂಬಗಳು ಹಾಗೂ ಶಾಲೆಯಿದೆ. ಈಗಾಗಲೇ ಎಲ್ಲರನ್ನೂ ಸಂರಕ್ಷಿಸಲಾಗಿದೆ. ಕಾರ್ಯಾಚರಣೆಯಲ್ಲಿ ಗೊಂದಲಗಳಿಗೆ ಆಸ್ಪದ ನೀಡುವುದಿಲ್ಲ. ಈಗಾಗಲೇ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತಿಮ ಘಟ್ಟದಲ್ಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್