ದೇಶ

ಈಶಾನ್ಯ ಭಾಗದಲ್ಲಿ ಪ್ರಬಲ ಭೂಕಂಪ: ಮಾಹಿತಿ ಪಡೆದ ರಾಜನಾಥ ಸಿಂಗ್

Manjula VN
ನವದೆಹಲಿ: ಭೂಕಂಪದ ಕುರಿತಂತೆ ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಾಗಿದ್ದು, ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಕಳುಹಿಸಿಕೊಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. 
ಈಶಾನ್ಯ ರಾಜ್ಯಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಈಶಾನ್ಯ ರಾಜ್ಯಗಳಲ್ಲಿ ಸಂಭವಿಸಿದ ಭೂಕಂಪ ಕುರಿತಂತೆ ಈಗಾಗಲೇ ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ದೂರವಾಣಿ ಮುಖಾಂತರ ಚರ್ಚೆ ನಡೆಸಲಾಗಿದೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ. 
ಭೂಕಂಪ ಕುರಿತಂತೆ ಇದೀಗ ಅಸ್ಸಾಂ ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಮಣಿಪುರ ಮುಖ್ಯಮಂತ್ರಿ ಸಂಪರ್ಕಕ್ಕೆ ಸಿಗದ ಕಾರಣ ಅವರ ಕಾರ್ಯದರ್ಶಿಯೊಂದಿಗೆ ಚರ್ಚೆ ನಡೆಸಿ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಲಾಗಿದೆ. ಭೂಕಂಪ ಪೀಡಿತ ಪ್ರದೇಶಗಳಿಗೆ ಇದೀಗ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಕಳುಹಿಸಲಾಗಿದ್ದು, ಎಲ್ಲಾ ರೀತಿಯ ಸಹಕಾರಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. 
ಇಂದು ಬೆಳಗ್ಗೆ 4.36ರ ಸುಮಾರಿಗೆ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಪ್ರಬಳ ಭೂಕಂಪದಲ್ಲಿ 6 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ 100 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಭೂಕಂಪದ ತೀವ್ರತೆ ರಿಕ್ಟರ್ ಮಾಪನದಲ್ಲಿ 6.7ರಷ್ಟು ದಾಖಲಾಗಿತ್ತು. 
SCROLL FOR NEXT