ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ
ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಟೈರ್ ಸ್ಫೋಟಗೊಂಡಿರುವ ಘಟನೆ ರಾಜಭೋಜ್ ಏರ್ ಪೋರ್ಟ್ ನಲ್ಲಿ ಬುಧವಾರ ನಡೆದಿದೆ...
ಭೋಪಾಲ್: ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಟೈರ್ ಸ್ಫೋಟಗೊಂಡಿರುವ ಘಟನೆ ರಾಜಭೋಜ್ ಏರ್ ಪೋರ್ಟ್ ನಲ್ಲಿ ಬುಧವಾರ ನಡೆದಿದೆ.
ನವದೆಹಲಿಯಿಂದ ಭೂಪಾಲ್ ಹೋಗುತ್ತಿದ್ದ ವಿಮಾನವು ಇಂದು ಬೆಳಗ್ಗೆ 7.30ರ ಸುಮಾರಿಗೆ ಭೂಪಾಲ್ ನ ರಾಜಭೋಜ್ ವಿಮಾನ ನಿಲ್ದಾಣಕ್ಕೆ ತಲುಪಿತ್ತು. ಈ ವೇಳೆ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದಂತೆ ವಿಮಾನದ ಟೈರ್ ಸ್ಪೋಟಗೊಂಡಿದೆ. ಪರಿಣಾಮ ವಿಮಾನದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.
ಟೈರ್ ಸ್ಪೋಟಗೊಳ್ಳುತ್ತಿದಂತೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.