ನವದೆಹಲಿ: ಇತ್ತೀಚೆಗೆ ಪಾಕಿಸ್ತಾನಕ್ಕೆ ಭೇಟಿ ನೀಡಿ ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿ ಮಾಡಿ ಬಂದ ಪ್ರಧಾನಿ ಮೋದಿ ನಿಲುವಿಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತ ಪಡಿಸಿದೆ.
ಪದೇ ಪದೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವ ಮೋದಿ, ದ್ವಿಪಕ್ಷೀಯ ಒಪ್ಪಂದದ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಆದರೆ ಗಡಿಭಾಗದಲ್ಲಿ ಪಾಕಿಸ್ತಾನ ತನ್ನ ನೀಚ ಕೃತ್ಯ ಮಾತ್ರ ಬಿಡುತ್ತಿಲ್ಲ ಎಂದು ಟೀಕಿಸಿರುವ ಕಾಂಗ್ರೆಸ್, ಮೋದಿಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗಿಂತ ಹೆಚ್ಚು ಪಾಕಿಸ್ತಾನದ ಮೇಲೆ ನಂಬಿಕೆ ಎಂದು ಟೀಕಿಸಿದೆ.
ಆಹ್ವಾನ ವಿಲ್ಲದೇ ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಉಗ್ರರು ಎರಡು ದೇಶಗಳ ನಡುವೆ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಪಾಕಿಸ್ತಾನದ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವ ಮುನ್ನ ಮೋದಿ ವಿರೋಧ ಪಕ್ಷಗಳ ವಿಶ್ವಾಸ ಗಳಿಸಬೇಕು ಎಂದು ಹೇಳಿರುವ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಪಠಾಣ್ ಕೋಟ್ ದಾಳಿಗೆ ಮೋದಿಯೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.