ತ್ರಿಪುರ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬಸ್ ಕೆಳಗುರುಳಿದ ಪರಿಣಾಮ ಮಹಿಳೆ ಸೇರಿದಂತೆ 6 ಜನ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ತ್ರಿಪುರದಲ್ಲಿ ನಡೆದಿದೆ.
ಅಗರ್ತಾಲಾದಿಂದ ತ್ರಿಪುರ ದಕ್ಷಿಣ ಭಾಗದಲ್ಲಿರುವ ಬೆನೋನಿಯಾಗೆ ತೆರಳುತ್ತಿರಬೇಕಾದರೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಘಟನೆಯಲ್ಲಿ ಸ್ಥಳದಲ್ಲೇ 6 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ 15 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಘಟನೆ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.