ಗಜೇಂದ್ರ ಚೌಹಾಣ್ ಅವರನ್ನು ಸ್ವಾಗತಿಸಿದ ಎಫ್‌ಟಿಐಐ ಸಿಬ್ಬಂದಿ 
ದೇಶ

ಭಾರಿ ಪ್ರತಿಭಟನೆಯ ನಡುವೆಯೇ ಎಫ್‌ಟಿಐಐ ಅಧ್ಯಕ್ಷರಾಗಿ ಚೌಹಾಣ್ ಪದಗ್ರಹಣ

ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ ಹಾಗೂ ಹಲವು ನಾಟಕೀಯ ಬೆಳವಣಿಗೆಗಳ ನಡುವೆಯೇ ಕಿರುತೆರೆ ಕಲಾವಿದ ಹಾಗೂ ಬಿಜೆಪಿ ನಾಯಕ ಗಜೇಂದ್ರ ಚೌಹಾಣ್ ಅವರು...

ಪುಣೆ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ ಹಾಗೂ ಹಲವು ನಾಟಕೀಯ ಬೆಳವಣಿಗೆಗಳ ನಡುವೆಯೇ ಕಿರುತೆರೆ ಕಲಾವಿದ ಹಾಗೂ ಬಿಜೆಪಿ ನಾಯಕ ಗಜೇಂದ್ರ ಚೌಹಾಣ್ ಅವರು ಗುರುವಾರ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ(ಎಫ್‌ಟಿಐಐ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಎಫ್‌ಟಿಐಐ ಮುಖ್ಯಸ್ಥರಾಗಿ ಗಜೇಂಜ್ರ ಚೌಹಾಣ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಎಫ್‌ಟಿಐಐ ಆಡಳಿತ ಮಂಡಳಿ ತಿಳಿಸಿದೆ.
ಈ ಮಧ್ಯೆ ಇಂದು ಅಧಿಕಾರ ಸ್ವೀಕರಿಸಲು ಚೌಹಾಣ್ ಅವರು ಎಫ್‌ಟಿಐಐ ಕಚೇರಿಗೆ ಆಗಮಿಸುತ್ತಿದ್ದಂತೆ, ಅವರ ನೇಮಕವನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಡ್ರಮ್‌ಗಳನ್ನು ಬಾರಿಸಿ, ಗಜೇಂದ್ರ ಚೌಹಾಣ್ ಮರಳಿ ಹೋಗು ಎಂಬ ಭಿತ್ತಿಫಲಕಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಚೌಹಾಣ್ ಅವರ ಕಾರು ಎಫ್‌ಟಿಐಐ ಆವರಣ ಪ್ರವೇಶಿಸುತ್ತಿದ್ದಂತೆಯೇ ಧರಣಿ ನಿರತರು ಘೋಷಣೆಗಳನ್ನು ಕೂಗಿದರು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT