ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ನಂತರ ಉಂಟಾಗಿದ್ದ ರಾಜಕೀಯ ಅತಂತ್ರ ಸ್ಥಿತಿಗೆ ಶನಿವಾರ ತೆರೆ ಬಿದಿದ್ದು, ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದಿದೆ.
ಮುಫ್ತಿ ಮೊಹಮ್ಮದ್ ಸಯೀದ್ ಸಾವಿನ ಹೊಸ ಸರ್ಕಾರ ರಚನೆಯಾಗ ಹಿನ್ನೆಲೆಯಲ್ಲಿ ರಾಜ್ಯಪಾಲ ಎನ್.ಎನ್.ವೋಹ್ರಾ ಅವರು ರಾಜ್ಯಪಾಲರ ಆಡಳಿತ ಜಾರಿಗೊಳಿಸಿ ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸಚಿವ ಜೀತೆಂದ್ರ ಸಿಂಗ್ ಅವರು ತಿಳಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಗುರುವಾರ ಮುಫ್ತಿ ಮೊಹಮ್ಮದ್ ಸಯೀದ್ ಅವರು ಮೃತಪಟ್ಟಿದ್ದರು. ಸಿಎಂ ಸಾವಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದ್ದು, ಶೋಕಾಚರಣೆ ಅವಧಿ ಮುಗಿಯುವವರೆಗೂ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಅವರ ಪುತ್ರಿ ಹಾಗೂ ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ ಅವರು ಹೇಳಿದ್ದರು. ಹೀಗಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು.