ಸಮ-ಬೆಸ ಸಂಖ್ಯೆ ಮಾದರಿ ಯೋಜನೆ (ಸಂಗ್ರಹ ಚಿತ್ರ) 
ದೇಶ

ಸಮ-ಬೆಸ ಪರೀಕ್ಷಾರ್ಥ ಪ್ರಯೋಗ ಜನವರಿ 15ಕ್ಕೆ ಅಂತ್ಯ: ದೆಹಲಿ ಸರ್ಕಾರ

ರಾಜಧಾನಿ ದೆಹಲಿಯಲ್ಲಿನ ವಾಯುಮಾಲಿನ್ಯವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಕೈಗೊಂಡಿದ್ದ ಸಮ-ಬೆಸ ಸಂಖ್ಯೆ ಪರಿಕ್ಷಾರ್ಥ ಪ್ರಯೋಗ ಇದೇ ಜನವರಿ 15ಕ್ಕೆ ಮುಕ್ತಾಯಗೊಳ್ಳಲಿದೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿನ ವಾಯುಮಾಲಿನ್ಯವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಕೈಗೊಂಡಿದ್ದ ಸಮ-ಬೆಸ ಸಂಖ್ಯೆ ಪರಿಕ್ಷಾರ್ಥ ಪ್ರಯೋಗ ಇದೇ ಜನವರಿ 15ಕ್ಕೆ  ಮುಕ್ತಾಯಗೊಳ್ಳಲಿದೆ ಎಂದು ದೆಹಲಿ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ.

ಜನವರಿ 15ರ ಬಳಿಕ ಈ ಮಾದರಿ ಇರುವುದಿಲ್ಲ. ಸಾಮಾನ್ಯದಂತೆ ಎಲ್ಲ ಸಂಖ್ಯೆಯ ವಾಹನಗಳು ಚಲಿಸಬಹುದು ಎಂದು ದೆಹಲಿಯ ಸಾರಿಗೆ ಸಚಿವ ಗೋಪಾಲ್ ರಾಯ್ ಅವರು  ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, "ಸರ್ಕಾರದ ಈ ನೂತನ ಯೋಜನೆಯ ಸಾಧಕ-ಭಾಧಕಗಳು ಕುರಿತು ಚರ್ಚೆ ನಡೆಯಲಿದೆ. ಅಧಿಕಾರಿಗಳಿಂದ ಯೋಜನೆಯ ಕುರಿತು  ಅಂಕಿ-ಅಂಶಗಳ  ಮಾಹಿತಿ ಪಡೆಯಲಾಗುತ್ತಿದೆ. ಜನವರಿ 15ರ ಬಳಿಕ ಸರ್ಕಾರದ ಈ ಯೋಜನೆಯನ್ನು ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಶನಿವಾರ ದೆಹಲಿ ಕೋರ್ಟ್ ಗೆ ಮಾಹಿತಿ ನೀಡಿದ ದೆಹಲಿ ಸರ್ಕಾರ, ಯೋಜನೆ ಕುರಿತಂತೆ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದೆ. ಮಾಹಿತಿ ಬಂದ ಬಳಿಕ ಅವುಗಳ  ಸಾಧಕ-ಭಾದಕಗಳನ್ನು ಚರ್ಚಿಸಿ ಸಮ-ಬೆಸ ಯೋಜನೆಯನ್ನು ಮುಂದುವರೆಸುವ ಅಥವಾ ಕೈಬಿಡುವ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದೆ. ಇನ್ನು ಇದೇ ಪ್ರಕರಣ  ಸಂಬಂಧ ದೆಹಲಿ ಸರ್ಕಾರದ ನಿರ್ಧಾರದ ವಿರುದ್ಧ ನ್ಯಾಯಾಲಯಕ್ಕೆ ಸಾಕಷ್ಟು ಅರ್ಜಿಗಳು ಬಂದಿದ್ದು, ಪ್ರಕರಣದ ತೀರ್ಪನ್ನು ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಇದಕ್ಕೂ ಮೊದಲು  ನಡೆದ ವಿಚಾರಣೆಯಲ್ಲಿ ಸಮ-ಬೆಸ ಸಂಖ್ಯೆ ಮಾದರಿ ಯೋಜನೆಯನ್ನು ಸ್ಥಗಿತಗೊಳಿಸಲು ಸಾಧ್ಯವೇ ಎಂದು ದೆಹಲಿ ನ್ಯಾಯಾಲಯ ಸರ್ಕಾರವನ್ನು ಕೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT