ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ (ಸಂಗ್ರಹ ಚಿತ್ರ) 
ದೇಶ

ರಾಮ ದೇಗುಲ ವಿಚಾರ ಚುನಾವಣಾ ಅಸ್ತ್ರವಲ್ಲ: ಸುಬ್ರಹ್ಮಣ್ಯನ್ ಸ್ವಾಮಿ

ವಿವಾದಿತ ಆಯೋಧ್ಯೆ ರಾಮ ದೇಗುಲ ವಿಚಾರವನ್ನು ಚುನಾವಣಾ ಅಸ್ತ್ರವಾಗಿ ನೋಡಬಾರದು ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ವಿವಾದಿತ ಆಯೋಧ್ಯೆ ರಾಮ ದೇಗುಲ ವಿಚಾರವನ್ನು ಚುನಾವಣಾ ಅಸ್ತ್ರವಾಗಿ ನೋಡಬಾರದು ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಮ ಮಂದಿರ ನಿರ್ಮಾಣ ವಿಚಾರಣ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಆಯೋಧ್ಯೆ ರಾಮ ದೇಗುಲ ವಿಚಾರವನ್ನು ಚುನಾವಣಾ ಅಸ್ತ್ರವೆಂಬ ದೃಷ್ಟಿಯಲ್ಲಿ ನೋಡಬಾರದು. ರಾಮ ಮಂದಿರ ಈ ವರ್ಷದಲ್ಲಿ ನಿರ್ಮಾಣವಾಗದಿದ್ದರೆ, ಮುಂದಿನ ದಿನಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಆಗಲೂ ಚುನಾವಣೆ ಬರುತ್ತದೆ. ಚುನಾವಣೆ ಇದ್ದ ಕಾರಣ ದೇಗುಲ ನಿರ್ಮಾಣವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತದೆ. ಚುನಾವಣಾ ಪ್ರಕ್ರಿಯೆಗಳು ಅದರ ಪಾಡಿಗೆ ಹೋಗುತ್ತಿರುತ್ತದೆ. ನಾನು ನಮ್ಮ ಕೆಲಸಗಳನ್ನು ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಜನರು ಅತೀ ಸೂಕ್ಷ್ಮತೆಯುಳ್ಳವರಾಗಿದ್ದು, ಅವರಿಗೆ ಚುನಾವಣಾ ಅಸ್ತ್ರಯಾವುದು, ಯಾವುದು ಅಲ್ಲ ಎಂಬುದರ ಬಗ್ಗೆ ಅವರಿಗೆ ಅರಿವಿರುತ್ತದೆ. ಶೇ.99 ರಷ್ಟು ಹಿಂದೂಗಳು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ಬಯಸುತ್ತಿದ್ದಾರೆ. ಇದಕ್ಕೆ ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿಲ್ಲ. ನಾವು ಯಾರ ವಿರುದ್ಧವೂ ಅಲ್ಲ ಎಂಬುದು ಅವರಿಗೂ ತಿಳಿದಿದೆ. ರಾಮ ದೇಗುಲ ನಿರ್ಮಾಣಕ್ಕೆ ಯಾವುದೇ ತೊಂದರೆಗಳಿಲ್ಲ ಎಂದು ಹೇಳಿದ್ದಾರೆ.

ಸುಬ್ರಹ್ಮಣ್ಯನ್ ಸ್ವಾಮಿ ಅವರು ಇತ್ತ ವಿಚಾರ ಸಂಕಿರಣದಲ್ಲಿ ರಾಮ ದೇಗುಲ ನಿರ್ಮಾಣ ಕುರಿತಂತೆ ಮಾತನಾಡುತ್ತಿದ್ದರೆ, ವಿಶ್ವ ವಿದ್ಯಾಲಯದ ಹೊರಾಂಗಣದಲ್ಲಿ ವಿದ್ಯಾರ್ಥಿಗಳ ಸಂಘಟನೆಗಳಾದ ಎನ್ಎಸ್ ಯುಐ, ಎಐಎಸ್ಎ ಮತ್ತು ಕೆವೈಎಸ್ ಪ್ರತಿಭಟನೆ ನಡೆಸುತ್ತಿವೆ.

ಈ ಹಿಂದೆ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಅಯೋಧ್ಯಯಲ್ಲಿ ರಾಮ ದೇಗುಲವನ್ನು 2016ರಲ್ಲಿ ಮುಸ್ಲಿಂ ಸಮುದಾಯಗಳ ಸಹಕಾರದೊಂದಿಗೆ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel