ಎನ್ನಾರೈಗಳಿಗೆ ಆಧಾರ್ ಕಾರ್ಡ್?
ಅನಿವಾಸಿ ಭಾರತೀಯರಿಗೂ ಇನ್ನು ಮುಂದೆ ಆಧಾರ್ ಕಾರ್ಡ್ ನೀಡಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿದೇಶಾಂಗ ಸಚಿವ...
ನವದೆಹಲಿ: ಅನಿವಾಸಿ ಭಾರತೀಯರಿಗೂ ಇನ್ನು ಮುಂದೆ ಆಧಾರ್ ಕಾರ್ಡ್ ನೀಡಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಶನಿವಾರ ನಡೆದ ಪ್ರವಾಸಿ ಭಾರತೀಯ ದಿವಸ್ ಸಮಾರಂಭದಲ್ಲಿ ಮಾತನಾಡಿದ ಅವರು, 'ಇನ್ನು ಮುಂದೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಉದ್ಯೋಗ ಅರಸಿ ಹೋಗುವ ಮಹಿಳೆಯರನ್ನು ಸರ್ಕಾರದ ಮೂಲಕವೇ ಕಳುಹಿಸಲಾಗುತ್ತದೆ. ಏಜೆನ್ಸಿಗಳಿಗೆ ಸಿಲುಕಿ ಸಂಕಷ್ಟ ಅನುಭವಿಸುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇನ್ನು ಮುಂದೆ ಅನಿವಾಸಿ ಭಾರತೀಯರಿಗೂ ಆಧಾರ್ ನೀಡಲು ನಿರ್ಧರಿಸಲಾಗಿದೆ,'' ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.