ಭಾರತದ ವಿದೇಶಾಂಗ ಕಾರ್ಯದರ್ಶಿ ಅಜಿತ್ ದೋವಲ್ 
ದೇಶ

ಪಠಾಣ್‌ಕೋಟ್‌ ದಾಳಿಕೋರರ ವಿರುದ್ಧ ಕ್ರಮ ಕೈಗೊಂಡರಷ್ಟೇ ಪಾಕ್ ಜೊತೆ ಮಾತುಕತೆ : ಅಜಿತ್‌ ದೋವಲ್‌

ಪಠಾಣ್‌ಕೋಟ್‌ ವಾಯುನೆಲೆಯ ಮೇಲೆ ದಾಳಿ ನಡೆಸಿರುವ ಪಾಕ್‌ ಭಯೋತ್ಪಾದಕರ ವಿರುದ್ಧ ಪಾಕಿಸ್ಥಾನ ಸರಕಾರ ನಿರ್ಣಾಯಕ...

ನವದೆಹಲಿ: ಪಠಾಣ್‌ಕೋಟ್‌ ವಾಯುನೆಲೆಯ ಮೇಲೆ ದಾಳಿ ನಡೆಸಿರುವ ಪಾಕ್‌ ಭಯೋತ್ಪಾದಕರ ವಿರುದ್ಧ ಪಾಕಿಸ್ಥಾನ ಸರಕಾರ ನಿರ್ಣಾಯಕ ಕ್ರಮ ತೆಗೆದುಕೊಂಡ  ನಂತರವಷ್ಟೇ ಭಾರತ-ಪಾಕಿಸ್ತಾನ ನಡುವೆ ಶಾಂತಿ ಮಾತುಕತೆ ನಡೆಯಲು ಸಾಧ್ಯ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೋಮವಾರ ಹೇಳಿದ್ದಾರೆ.

ಇದೇ ಜನವರಿ 15ರಂದು ನಡೆಸಲು ಉದ್ದೇಶಿಸಲಾಗಿರುವ ಭಾರತ - ಪಾಕ್‌ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ನಿಗದಿಯಾಗಿತ್ತು. ಆದರೆ ಪಾಕಿಸ್ತಾನ ಮೂಲದ ಭಯೋತ್ಪಾದಕರು ವಾಯುನೆಲೆ ಮೇಲೆ ದಾಳಿ ನಡೆಸಿದ್ದಾರೆ ಎಂಬ ಶಂಕೆ ಕೇಳಿಬರುತ್ತಿರುವುದರಿಂದ ಮಾತುಕತೆಗೆ ದಟ್ಟವಾದ ಕಾರ್ಮೋಡ ಕವಿದಿದೆ.

ಪಠಾಣ್ ಕೋಟ್ ವಾಯುನೆಲೆ ಮೇಲೆ ದಾಳಿಗೆ ಸಂಬಂಧಪಟ್ಟಂತೆ ಭಾರತ ಒದಗಿಸಿರುವ ಸಾಕ್ಷ್ಯಗಳ ಆಧಾರದ ಮೇಲೆ ಪಾಕ್ ಕ್ರಮ ಕೈಗೊಳ್ಳುವುದನ್ನು ಭಾರತ ನಿರೀಕ್ಷಿಸುತ್ತಿದೆ.
"ಪಠಾಣ್‌ಕೋಟ್‌ ವಾಯು ನೆಲೆ ಮೇಲೆ ದಾಳಿ ನಡೆಸಿರುವ ಉಗ್ರರ ವಿರುದ್ಧ ಪಾಕಿಸ್ಥಾನ ಸರಕಾರ ಭಾರತಕ್ಕೆ ತೃಪ್ತಿಕರವಾದ ರೀತಿಯಲ್ಲಿ ಕಠಿಣ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಂಡ ಬಳಿಕವೇ ಉಭಯ ದೇಶಗಳ ನಡುವಿನ ವಿದೇಶ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ನಡೆಯಲಿದೆ'. ಆದರೆ ಹಿಂದಿ ದೈನಿಕವೊಂದರಲ್ಲಿ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆ ರದ್ದಾಗಿರುವುದನ್ನು ಅವರು ಅಲ್ಲಗಳೆದಿದ್ದಾರೆ. "ನಾನು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ' ಎಂದು ಎಎನ್ ಐ ಸುದ್ದಿ ಸಂಸ್ಥೆಗೆ ಸ್ಪಷ್ಟನೆ ನೀಡಿದ್ದಾರೆ.

ಭಾರತ - ಪಾಕ್‌ ನಡುವೆ ಜನವರಿ 15ರಂದು ನಡೆಯಲಿರುವ ಮಾತುಕತೆ ರದ್ದಾಗಿದೆ ಎಂದು ತಾನು ಹೇಳಿಯೇ ಇಲ್ಲ ಎಂದು ದೋವಾಲ್‌ ಎನ್‌ಡಿಟಿವಿ ಜತೆಗೆ ಮಾತನಾಡುತ್ತಾ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕ್ ವಿದೇಶಾಂಗ ಕಾರ್ಯದರ್ಶಿ ಸರ್ತಾಜ್ ಅಜೀಜ್, ಪೂರ್ವ ನಿಗದಿಯಂತೆ ಎರಡೂ ದೇಶಗಳ ನಡುವೆ ಮಾತುಕತೆ ನಡೆಯಲಿದೆ ಎಂದು ಲಾಹೋರ್ ನಲ್ಲಿ ಸುದ್ದಿಗಾರರಿಗೆ ಹೇಳಿದ್ದಾರೆ.

ಪಾಕ್ ಮೂಲದ ಜೈಶೆ ಇ ಮೊಹಮ್ಮದ್ ಸಂಘಟನೆಯ ಐವರು ಭಯೋತ್ಪಾದಕರು ಪಠಾಣ್ ಕೋಟ್ ಮೇಲಿನ ದಾಳಿಯಲ್ಲಿ ಪಾತ್ರ ವಹಿಸಿರಬಹುದು ಎಂಬ ಶಂಕೆ ಭಾರತದ್ದು. ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಭಾರತದ್ದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!