ಏರ್ ಇಂಡಿಯಾ ವಿಮಾನ 
ದೇಶ

ಉಗ್ರರ ಭಯ: 3 ತಾಸು ಮುನ್ನ ಏರ್ ಪೋರ್ಟ್ ತಲುಪಲು ಪ್ರಯಾಣಿಕರಿಗೆ ಏರ್ ಇಂಡಿಯಾ ಸೂಚನೆ

ಭದ್ರತಾ ಮುನ್ನೆಚ್ಚರಿಕೆಯ ಕ್ರಮವಾಗಿ ಏರ್ ಇಂಡಿಯಾ ವಿಮಾನ ಸಂಸ್ಥೆ ತನ್ನ ಪ್ರಯಾಣಿಕರಿಗೆ ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಮನವಿ ಮಾಡಿದೆ....

ನವದೆಹಲಿ: ಪಠಾಣ್‌ಕೋಟ್‌ ವಾಯುನೆಲೆ ಮೇಲಿನ ಪಾಕ್‌ ಉಗ್ರರ ದಾಳಿ ಹಿನ್ನೆಲೆಯಲ್ಲಿ ದೇಶಾದ್ಯಂತ ನೀಡಲಾಗಿರುವ ಭದ್ರತಾ ಮುನ್ನೆಚ್ಚರಿಕೆಯ ಕ್ರಮವಾಗಿ ಏರ್ ಇಂಡಿಯಾ ವಿಮಾನ ಸಂಸ್ಥೆ ತನ್ನ ಪ್ರಯಾಣಿಕರಿಗೆ ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಮನವಿ ಮಾಡಿದೆ.

ಭದ್ರತಾ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣಿಕರನ್ನು ಹಾಗೂ ಅವರ ಸರಕು ಸರಂಜಾಮುಗಳನ್ನು ಕೂಲಂಕುಷ ಪರೀಕ್ಷೆಗೊಳಪಡಿಸುವುದು ಅಗತ್ಯವಾಗಿದೆ. ಇದಕ್ಕೆ ಸಾಕಷ್ಟು ಸಮಯ ಬೇಕಾಗಿರುವುದರಿಂದ ಪ್ರಯಾಣಿಕರು ತಮ್ಮ ನಿಗದಿತ ವಿಮಾನ ಹಾರಾಟ ವೇಳೆಗೆ ಮೂರು ತಾಸು ಮೊದಲೇ ವಿಮಾನ ನಿಲ್ದಾಣವನ್ನು ತಲುಪಿ ಭದ್ರತಾ ಪ್ರಕ್ರಿಯೆಗಳಿಗೆ ಒಳಪಡಬೇಕು ಮತ್ತು ಆ ಮೂಲಕ ಯಾವುದೇ ಅನಾನುಕೂಲತೆ ಉಂಟಾಗುವುದನ್ನು ತಪ್ಪಿಸಬೇಕು ಎಂದು ಏರ್ ಇಂಡಿಯಾ ತನ್ನ ಪ್ರಯಾಣಿಕರಿಗೆ ತಿಳಿಸಿದೆ.

ತನ್ನ ಪ್ರಯಾಣಿಕರ ಸುರಕ್ಷೆ ಮತ್ತು ಭದ್ರತೆಗೆ ಗರಿಷ್ಠ ಆದ್ಯತೆ ನೀಡುವುದರಿಂದ ಇದಕ್ಕೆ ಅನುಗುಣವಾಗಿ ಪ್ರಯಾಣಿಕರು ಸಹಕರಿಸಬೇಕು ಎಂದು ಅದು ಕೋರಿದೆ ಇದುವರೆಗಿನ ನಿಯಮಗಳ ಪ್ರಕಾರ ಏರಿಂಡಿಯಾ ವಿಮಾನ ಪ್ರಯಾಣಿಕರು ನಿಗದಿತ ವಿಮಾನ ಹಾರಾಟ ವೇಳೆಗೆ ಒಂದು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವುದು ಕಡ್ಡಾಯವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ