(ಸಂಗ್ರಹ ಚಿತ್ರ) 
ದೇಶ

ಮ್ಯಾಗಿ ಮೇಲೆ ಸುಪ್ರೀಂ ಕಣ್ಣು: ವರದಿಸಲ್ಲಿಸಲು ಅವಧಿ ನೀಡಿದ ಸುಪ್ರೀಂ

ವಿಷಕಾರಿ ಅಂಶ ಪತ್ತೆಯಾಗಿ ನಿಷೇಧಕ್ಕೆ ಒಳಗಾಗಿದ್ದ ನೆಸ್ಲೆ ಸಂಸ್ಥೆ ಮ್ಯಾಗಿ ನೂಡಲ್ಸ್ ಮೇಲಿನ ನಿಷೇಧ ತೆರವಿನ ಬಳಿಕ ನೂತನವಾಗಿ ಮಾರುಕಟ್ಟೆಗೆ ಬಂದಿರುವ ಮ್ಯಾಗಿ ನ್ಯೂಡಲ್ಸ್'ನ ಮರುಪರೀಕ್ಷೆ ವರದಿಯನ್ನು 8 ವಾರದೊಳಗಾಗಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕದ...

ನವದೆಹಲಿ: ವಿಷಕಾರಿ ಅಂಶ ಪತ್ತೆಯಾಗಿ ನಿಷೇಧಕ್ಕೆ ಒಳಗಾಗಿದ್ದ ನೆಸ್ಲೆ ಸಂಸ್ಥೆ ಮ್ಯಾಗಿ ನೂಡಲ್ಸ್ ಮೇಲಿನ ನಿಷೇಧ ತೆರವಿನ ಬಳಿಕ ನೂತನವಾಗಿ ಮಾರುಕಟ್ಟೆಗೆ ಬಂದಿರುವ ಮ್ಯಾಗಿ ನ್ಯೂಡಲ್ಸ್'ನ ಮರುಪರೀಕ್ಷೆ ವರದಿಯನ್ನು 8 ವಾರದೊಳಗಾಗಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕದ ಮೈಸೂರು ಲ್ಯಾಬೋರೇಟರಿಗೆ ಬುಧವಾರ ಸೂಚನೆ ನೀಡಿದೆ.

ಈ ಹಿಂದೆ ನೆಸ್ಲೆ ಸಂಸ್ಥೆಯ ಖ್ಯಾತ ತಿನಿಸು ಮ್ಯಾಗಿ ನ್ಯೂಡಲ್ಸ್ ನಲ್ಲಿ ಸೀಸ ಮತ್ತು ಗ್ಲುಟಮೇಟ್ ಅಂಶ ಹೆಚ್ಚಿದೆ ಎಂಬ ಆರೋಪದಡಿಯಲ್ಲಿ ದೇಶದ ವಿವಿಧ ರಾಜ್ಯ ಸರ್ಕಾರಗಳು ಅದಕ್ಕೆ ನಿಷೇಧ  ಹೇರಿದ್ದವು. ಅಲ್ಲದೆ ಮ್ಯಾಗಿ ನ್ಯೂಡಲ್ಸ್ ನ 16 ಸ್ಯಾಂಪಲ್ಸ್ ಅನ್ನು ಪರೀಕ್ಷೆಗೊಳಪಡಿಸಬೇಕು ಎಂದು ಎನ್ ಸಿ ಡಿಆರ್ ಸಿ ಆದೇಶ ಹೊರಡಿಸಿತ್ತು. ಇದನ್ನು ನೆಸ್ಲೆ ಇಂಡಿಯಾ ಸಂಸ್ಥೆ ಪ್ರಶ್ನಿಸಿ ಕಾನೂನು  ಸಮರಕ್ಕಿಳಿದಿತ್ತು. ಬಳಿಕ ಮ್ಯಾಗಿ ನ್ಯೂಡಲ್ಸ್ ಮೇಲಿನ ನಿಷೇಧ ತೆರವುಗೊಳಿಸಬೇಕೆಂದು ನೆಸ್ಲೆ ಕಂಪನಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು.

ವಿಚಾರಣೆ ನಂತರ ಕೋರ್ಟ್  ಮ್ಯಾಗಿ ಮೇಲಿನ ನಿಷೇಧವನ್ನು ತೆರವುಗೊಳಿಸಿ ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆಯಾಗುವ ಮ್ಯಾಗಿ ನ್ಯೂಡಲ್ಸ್ ಅನ್ನು ಪರೀಕ್ಷೆಗೊಳಪಡಿಸಬೇಕು ಎಂದು  ನೆಸ್ಲೆ ಇಂಡಿಯಾಕ್ಕೆ ಈ ಹಿಂದೆ ಬಾಂಬೆ ಹೈಕೋರ್ಟ್ ಆದೇಶ ನೀಡಿತ್ತು.

ಬಾಂಬೆ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್ ಮೈಸೂರಿನಲ್ಲಿರುವ  ಲ್ಯಾಬೋರೇಟರಿಯಲ್ಲಿ ಮರುಪರೀಕ್ಷೆ ನಡೆಸುವಂತೆ ಸೂಚನೆ ನೀಡಿತ್ತು. ನಂತರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿರುವ ಸುಪ್ರೀಕೋರ್ಟ್ ಮುಂದಿನ 8 ವಾರಗಳಲ್ಲಿ ಮ್ಯಾಗಿಯ ಹೊಸ ಮಾದರಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ