ಪಿಐಎ ಕಚೇರಿ 
ದೇಶ

ದೆಹಲಿಯ ಪಾಕ್ ಏರ್ ಲೈನ್ಸ್ ಕಚೇರಿ ಮೇಲೆ ದಾಳಿ, ಕಿಟಕಿ, ಕಂಪ್ಯೂಟರ್ ಧ್ವಂಸ

ದೆಹಲಿಯ ಬರಖಾಂಬ ರಸ್ತೆಯಲ್ಲಿರುವ ಪಾಕಿಸ್ತಾನ್ ಇಂಟರ್​ನ್ಯಾಷನಲ್ ಏರ್​ಲೈನ್ಸ್ ಕಚೇರಿ ಮೇಲೆ ಗುರುವಾರ ಹಿಂದೂಪರ ಸಂಘಟನೆಯ ಕಾರ್ಯಕರ್ತರು ದಾಳಿ

ನವದೆಹಲಿ: ದೆಹಲಿಯ ಬರಖಾಂಬ ರಸ್ತೆಯಲ್ಲಿರುವ ಪಾಕಿಸ್ತಾನ್ ಇಂಟರ್​ನ್ಯಾಷನಲ್ ಏರ್​ಲೈನ್ಸ್ ಕಚೇರಿ ಮೇಲೆ ಗುರುವಾರ ಹಿಂದೂಪರ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿ, ಕಿಟಕಿ ಗಾಜು ಹಾಗೂ ಕಂಪ್ಯೂಟರ್​ಗಳನ್ನು ಧ್ವಂಸಗೊಳಿಸಿದ್ದಾರೆ.
ಇಂದು ಮಧ್ಯಾಹ್ನ ಕಾರ್ಯಕರ್ತರ ಗುಂಪೊಂದು ಪಾಕ್ ಏರ್ ಲೈನ್ಸ್ ಕಚೇರಿ ಮೇಲೆ ದಾಳಿ ಮಾಡಿದ್ದು, ದಾಳಿ ಸುದ್ದಿ ತಿಳಿಯುತಿದ್ದಂತೆಯೇ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯನ್ನು ಖಚಿತ ಪಡಿಸಿದ ಡಿಸಿಪಿ ಜತಿನ್ ನರ್ವಾಲ್ ಅವರು, ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಇನ್ನು ದಾಳಿಯ ಬೆನ್ನಲ್ಲೇ ಭಾರತ ಸರ್ಕಾರವನ್ನು ಸಂಪರ್ಕಿಸಿದ ಪಾಕಿಸ್ತಾನ ರಾಜತಾಂತ್ರಿಕ ಕಚೇರಿಯು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದೆ.
ಪಿಐಎಯ ಎಲ್ಲಾ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ, ರಕ್ಷಣೆ ಒದಗಿಸುವುದು ಭಾರತ ಸರ್ಕಾರದ ಹೊಣೆ ಎಂದು ಪಾಕಿಸ್ತಾನ ರಾಜತಾಂತ್ರಿಕ ಕಚೇರಿ ವಕ್ತಾರ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT