ಸಾಂದರ್ಭಿಕ ಚಿತ್ರ 
ದೇಶ

ಅಪಘಾತದಿಂದ ಬಹಿರಂಗವಾಯ್ತು ಅಪ್ರಾಪ್ತೆ ಮೇಲಿನ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ

ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದು, ಇದರಿಂದಾಗಿ ಬಾಲಕಿ ಗರ್ಭಧರಿಸಿದ ಘಟನೆ ಅಪಘಾತ ಪ್ರಕರಣದ ನಂತರ ಬೆಳಕಿಗೆ ಬಂದಿದೆ.

ಥಾಣೆ: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದು, ಇದರಿಂದಾಗಿ ಬಾಲಕಿ ಗರ್ಭಧರಿಸಿದ ಘಟನೆ ಅಪಘಾತ ಪ್ರಕರಣದ ನಂತರ ಬೆಳಕಿಗೆ ಬಂದಿದೆ.
ಅಪಘಾತವೊಂದರಲ್ಲಿ ಗಾಯಗೊಂಡಿದ್ದ 14 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಮತ್ತು ಅದರಿಂದ ಬಾಲಕಿ ಗರ್ಭಧರಿಸಿರುವುದು ಪತ್ತೆಯಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ.
ಬಾಲಕಿ, ಆಕೆಯ ತಂಗಿ ಹಾಗೂ ಪೋಷಕರು ವಾಗ್ಲೆ ಎಸ್ಟೇಟ್ ಪ್ರದೇಶದ ಫೂಟ್‌ಪಾತ್ ಮೇಲೆ ವಾಸಿಸುತ್ತಿದ್ದು, ಜನವರಿ 6ರಂದು ವಾಹನೊಂದು ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ವೈದ್ಯರು ಗರ್ಭಧಾರಣೆ ಪರೀಕ್ಷೆ ನಡೆಸಿದ್ದು, ಪರೀಕ್ಷೆಯಲ್ಲಿ ಬಾಲಕಿ ಒಂದು ತಿಂಗಳ ಗರ್ಭಿಣಿ ಎಂಬುದು ಪತ್ತೆಯಾಗಿದೆ.
ಈ ಬಗ್ಗೆ ಬಾಲಕಿಯನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ಮೆಹಬೂಬ್ ಸಯೀದ್ ಎಂಬ 23 ವರ್ಷದ ಯುವಕ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಶ್ರೆನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಯುವಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಥಾಣೆ ಪೊಲೀಸ್ ಪಿಆರ್‌ಒ ಗಜಾನನ್ ಕಬ್ದುಲೆ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!