ನವದೆಹಲಿ: ಗಣರಾಜ್ಯೋತ್ಸವ ದಿನ ಇನ್ನು ಕೆಲವೇ ದಿನಗಳಲ್ಲಿ ಹತ್ತಿರುವ ಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶುಕ್ರವಾರ ಚರ್ಚೆ ನಡೆಸಿದ್ದಾರೆ.
ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹಾಗೂ ಇನ್ನಿತರೆ ಅಧಿಕಾರಿಗಳು ಈಗಾಗಲೇ ಚರ್ಚೆ ನಡೆಸಿದ್ದು, ದೇಶದ ಭದ್ರತಾ ಪರಿಸ್ಥಿತಿ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಅಧಿಕಾರಿಗಳು ಧೀರ್ಘಾಕಾಲಿಕ ಚರ್ಚೆ ನಡೆಸಿದ್ದು, ಚರ್ಚೆಯಲ್ಲಿ ಪಠಾಣ್ ಕೋಟ್ ದಾಳಿಯನ್ನು ಗಮನದಲ್ಲಿರಿಸಿಕೊಂಡು ರಾಜಧಾನಿ ದೆಹಲಿ ಸೇರಿದಂತೆ ಇಲ್ಲಿ ಇನ್ನಿತರೆ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆಯನ್ನು ಮುಂದುವರೆಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮೂಲಗಳ ಪ್ರಕಾರ ಈಗಾಗಲೇ ಅಂತರಾಷ್ಟ್ರೀಯ ಗಡಿ ಭಾಗದ ಮೂಲಕ ಪಾಕಿಸ್ತಾನದಿಂದ 15 ಉಗ್ರರು ಭಾರತದೊಳಗೆ ಪ್ರವೇಶಿಸಿದೆ ಎಂದು ಪಂಜಾಬ್ ಪೊಲೀಸರು ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ. ಜನವರಿ 26ರಂದು ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಮುಖ್ಯಸ್ಥರಾಗಿ ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಅವರು ಆಗಮಿಸಲಿದ್ದಾರೆ. ಹೀಗಾಗಿ ಯಾವುದೇ ಸಮಸ್ಯೆಗಳು ಎದುರಾಗದಂತೆ ದೆಹಲಿಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವ ಅಧಿಕಾರಿಗಳು ಈಗಾಗಲೇ 10,000 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.