ದೆಹಲಿ: ಚಲಿಸುತ್ತಿದ್ದ ಕಾರಿನಲ್ಲಿ ಗೃಹಿಣಿ ಮೇಲೆ ಸಾಮೂಹಿಕ ಅತ್ಯಾಚಾರ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ನಾಲ್ವರು ಕಾಮೂಕರು ಗೃಹಿಣಿಯೊಬ್ಬರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ...
ನೋಯ್ಡಾ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ನಾಲ್ವರು ಕಾಮೂಕರು ಗೃಹಿಣಿಯೊಬ್ಬರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಹತ್ತಿಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
42 ವರ್ಷದ ಗೃಹಿಣಿ ಜೈಲಿನಲ್ಲಿದ್ದ ತನ್ನ ಗಂಡನನ್ನು ಕಾಣಲು ಬಸ್ ಸ್ಟಾಂಡ್ ನಲ್ಲಿ ಕಾಯುತ್ತಿದ್ದ ವೇಳೆ ಸ್ಕಾರ್ಪಿಯೋ ಕಾರಿನಲ್ಲಿ ಬಂದ ನಾಲ್ವರು ಲುಕ್ಸರ್ ಜೈಲಿಗೆ ಡ್ರಾಪ್ ಮಾಡುವುದಾಗಿ ಹೇಳಿ ಕಾರನ್ನು ಹತ್ತಿಕೊಂಡಿದ್ದಾರೆ ನಂತರ ಆಕೆಗೆ ತಿಂಡಿ ಹಾಗೂ ಕುಡಿಯಲು ಪಾನೀಯ ನೀಡಿದ್ದಾರೆ. ಪಾನೀಯ ಸೇವನೆ ಬಳಿಕ ಪ್ರಜ್ಞಾಹೀನರಾದ ಮಹಿಳೆ ಮೇಲೆ ನಾಲ್ವರು ಕಾಮಿಗಳು ಅತ್ಯಾಚಾರವೆಸಗಿ, ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ.
ಈ ಸಂಬಂಧ ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಅತ್ಯಾಚಾರ ನಡೆಸಿದವರ ಪೈಕಿ ಇಬ್ಬರು ತನಗೆ ಪರಿಚಯವಿರುವುದಾಗಿ ಆಕೆ ತಿಳಿಸಿದ್ದಾಳೆ. ಸಂತ್ರಸ್ತ ಮಹಿಳೆ ಗಾಜಿಯಾಬಾದ್ ಮೂಲದವಳಾಗಿದ್ದು, ಇಬ್ಬರು ಆರೋಪಿಗಳು ಗ್ರೇಟರ್ ನೊಯ್ಡಾದವರಾಗಿದ್ದಾರೆ ಎನ್ನಲಾಗಿದೆ. ಸದ್ಯ ಸಂತ್ರಸ್ತ ಮಹಿಳೆಗೆ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.