ಅಣ್ಣಾ ಹಜಾರೆಗೆ ಮತ್ತೊಮ್ಮೆ ಕೊಲ್ಲುವ ಬೆದರಿಕೆ ಪತ್ರ
ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಅಣ್ಣಾ ಹಜಾರೆಗೆ ಬೆದರಿಕೆ ಪತ್ರ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ....
ಮುಂಬಯಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಅಣ್ಣಾ ಹಜಾರೆಗೆ ಬೆದರಿಕೆ ಪತ್ರ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ.
ಹಿರಿಯ ಗಾಂಧಿ ವಾದಿ ಅಣ್ಣಾ ಹಜಾರೆ ಅವರ ಜೀವನ ಜನವರಿ 26 ರಂದು ಕೊನೆಗೊಳ್ಳಲಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಬಾರಿ ಅವರನ್ನು ಯಾವ ಪೊಲೀಸರಿಂದಲೂ ರಕ್ಷಿಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಬರೆಯಲಾಗಿದೆ.
ಇನ್ನು ಈ ಸಂಬಂಧ ಅಹಮದಾನಗರ ಜಿಲ್ಲೆಯ ಪರ್ನರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಪಿಸಿ ಸೆಕ್ಷನ್ 507 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದುವರೆಗೂ ಅಣ್ಣಾ ಹಜಾರೆಗೆ ಹಲವು ಬೆದರಿಕೆ ಕರೆ ಬಂದಿದ್ದು, ಮಹಾರಾಷ್ಟ್ರ ಸರ್ಕಾರ ಅಣ್ಣಾ ಹಜಾರೆ ಅವರಿಗೆ ಝೆಡ್ ಪ್ಲಸ್ ಭದ್ರತೆ ಒದಗಿಸಲು ಮುಂದಾಗಿತ್ತು, ಆದರೆ ಅಣ್ಣಾ ಹಜಾರೆ ಅದನ್ನು ನಿರಾಕರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.