ದೇಶ

ಒಆರ್ ಒಪಿ ಯೋಜನೆಯಲ್ಲಿ ಕೆಲ ಬದಲಾವಣೆಗೆ ಆಗ್ರಹಿಸಿ ಜೇಟ್ಲಿ ನಿವಾಸದ ಎದುರು ನಿವೃತ್ತ ಯೋಧರ ಪ್ರತಿಭಟನೆ

Srinivas Rao BV

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವಂತೆ ಆಗ್ರಹಿಸಿ ನೂರಾರು ನಿವೃತ್ತ ಯೋಧರು ಹಣಕಾಸು ಸಚಿವ ಅರುಣ್ ಜೇಟ್ಲಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸರ್ಕಾರದ ಪ್ರತಿನಿಧಿಗಳು ತಮ್ಮೊಂದಿಗೆ ಮಾತನಾಡುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ನಿವೃತ್ತ ಯೋಧರು ಹೇಳಿದ್ದಾರೆ. ಒಆರ್ ಒಪಿ ಅಧಿಸೂಚನೆಯಲ್ಲಿರುವ ಕೆಲವು ಲೋಪದೋಷಗಳನ್ನು ಸರಿಪಡಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದು ನಿವೃತ್ತ ಯೋಧರೊಬ್ಬರು ಹೇಳಿದ್ದಾರೆ.
ಸರ್ಕಾರದ ಅಧಿಸೂಚನೆ ಪ್ರಕಾರ ಪಿಂಚಣಿಯನ್ನು 5 ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡಲಾಗುತ್ತದೆ. ಆದರೆ ಪ್ರತಿ ವರ್ಷ ಪರಿಷ್ಕರಣೆಯಾಗಬೇಕೆಂಬುದು ನಿವೃತ್ತ ಯೋಧರ ಆಗ್ರಹವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಭರವಸೆ ನೀಡುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ನಿವೃತ್ತ ಯೋಧರು ಹೇಳಿದ್ದಾರೆ. 

SCROLL FOR NEXT