ದೇಶದ್ರೋಹ ಕೇಸ್: ಹಾರ್ದಿಕ್ ಪಟೇಲ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ದೇಶದ್ರೋಹದ ಆರೋಪ ಎದುರಿಸುತ್ತಿರುವ ಗುಜರಾತ್ನಲ್ಲಿ ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಹಾಗೂ...
ಅಹಮದಾಬಾದ್: ಗುಜರಾತ್ನಲ್ಲಿ ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸಿ, ದೇಶದ್ರೋಹದ ಆರೋಪ ಎದುರಿಸುತ್ತಿರುವ ಹಾರ್ದಿಕ್ ಪಟೇಲ್ ಹಾಗೂ ಆತನ ಮೂವರು ಬೆಂಬಲಿಗರ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಸೋಮವಾರ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಹಾರ್ದಿಕ್ ಪಟೇಲ್ ಹಾಗೂ ಬೆಂಬಲಿಗರಾದ ಕೇತನ್ ಪಟೇಲ್, ದಿನೇಶ್ ಬಂಭನಿಯಾ ವಿರುದ್ಧ ಸುಮಾರು 2,700 ಪುಟಗಳ ಚಾರ್ಜ್ಶೀಟ್ ಅನ್ನು ಪೊಲೀಸರು ಇಂದು ಮೆಟ್ರೋಪೊಲಿಟನ್ ಕೋರ್ಟ್ಗೆ ಸಲ್ಲಿಸಿದ್ದಾರೆ.
ಹಾರ್ದಿಕ್ ಪಟೇಲ್ ಅವರ ಇನ್ನು ಇಬ್ಬರು ಬೆಂಬಲಿಗರಾದ ಅಮ್ರಿಶ್ ಪಟೇಲ್ ಹಾಗೂ ಅಲ್ಪೇಶ್ ಕಠಿರಿಯಾ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ 'ಪರಾರಿಯಾಗಿದ್ದಾರೆ' ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸರ ಹತ್ಯೆಗೆ ಪ್ರಚೋದನೆ ಹಾಗೂ ಗುಜರಾತ್ ಸರ್ಕಾರದ ವಿರುದ್ಧ ವೇತನ ಸಮರಕ್ಕೆ ಕರೆ ನೀಡಿದ್ದ ಆರೋಪದ ಹಾರ್ದಿಕ್ ಪಟೇಲ್ ಹಾಗೂ ಆತನ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.