ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಪೊಲೀಸರಿಂದ ಕೇಜ್ರಿವಾಲ್ ಭದ್ರತೆಯ ಮಾಹಿತಿ ಸೋರಿಕೆ: ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಯಾವುದೇ ಭದ್ರತೆ ಒದಗಿಸುವಂತೆ ಕೇಳದಿದ್ದರೂ ಅವರ ಭದ್ರತೆಗೆ ಸಂಬಂಧಿಸಿದ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಯಾವುದೇ ಭದ್ರತೆ ಒದಗಿಸುವಂತೆ ಕೇಳದಿದ್ದರೂ ಅವರ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ದೆಹಲಿ ಪೊಲೀಸರು ಸೋರಿಕೆ ಮಾಡುತ್ತಿದ್ದಾರೆ ಎಂದು ಮಂಗಳವಾರ ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಕೇಜ್ರಿವಾಲ್ ಅವರ ಪಿಎ ವೇದಿಕೆಯಿಂದ ಕೆಳಗಿಳಿಯುವಂತೆ ಪೊಲೀಸರಿಗೆ ಸೂಚಿಸಿದ್ದರು ಎಂಬ ಕೆಲವು ಮಾಧ್ಯಮಗಳ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ ನಾಯಕ ದಿಲಿಪ್ ಪಾಂಡೆ ಅವರು, ದೆಹಲಿ ಪೊಲೀಸರು ಆ ಪೊಲೀಸ್ ಅಧಿಕಾರಿಯ ಹೆಸರು ಬಹಿರಂಗ ಪಡಿಸಿದರೆ, ಆ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
'ದೆಹಲಿ ಪೊಲೀಸರು ಸಿಎಂ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ. ಈ ಮೂಲಕ ದೆಹಲಿ ಸಿಎಂ ಮೇಲೆ ನಾಳೆ ನಡೆಯಬಹುದಾದ ದಾಳಿಯಿಂದ ತಾವೂ ಸುರಕ್ಷಿತವಾಗಲು ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ' ಎಂದು ಆಪ್ ನಾಯಕ ಆರೋಪಿಸಿದರು.
ಭದ್ರತಾ ಸಿಬ್ಬಂದಿಯನ್ನು ವೇದಿಕೆಯಿಂದ ಕೇಳಗಿಳಿಯುವಂತೆ ಸೂಚಿಸಿದ ಕೇಜ್ರಿವಾಲ್ ಅವರ ಪಿಎ ಯಾರೂ ಎಂಬುದನ್ನು ಬಹಿರಂಗಪಡಿಸಲಿ. ಆ ಬಗ್ಗೆ ನಾವು ತನಿಖೆ ನಡೆಸುತ್ತೇವೆ ಎಂದು ಪಾಂಡೆ ಹೇಳಿದರು.
ಕಳೆದ ಭಾನುವಾರ ಯುವತಿಯೊಬ್ಬರು ಕೇಜ್ರಿವಾಲ್ ಅವರ ಮೇಲೆ ಮಸಿ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್