ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ(ಸಾಂದರ್ಭಿಕ ಚಿತ್ರ) 
ದೇಶ

ಕಾಶ್ಮೀರದಲ್ಲಿ ಸೇನೆ ಗುಂಡಿಗೆ ಇಬ್ಬರು ಉಗ್ರರು ಬಲಿ

ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು- ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಗೆರಿಲ್ಲಾ ಪ್ರತ್ಯೇಕತಾವಾದಿಗಳನ್ನು ಹತ್ಯೆ ಮಾಡಲಾಗಿದೆ.

ಶ್ರೀನಗರ: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು- ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಗೆರಿಲ್ಲಾ ಪ್ರತ್ಯೇಕತಾವಾದಿಗಳನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ  ಓರ್ವ ನಾಗರಿಕನಿಗೆ ಗಾಯಗಳಾಗಿದ್ದಾರೆ ಮತ್ತೋರ್ವ ನಾಗರಿಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯಾದ ರಿಯಾಜ್ ನಾಯ್ಕ್ ಲತೀಫ್ ದರ್ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರೆಂದು ಗುರುತಿಸಲಾಗಿದೆ. ಗುಂಡೇಟೀಗೆ ಗುರಿಯಾದ ನಾಗರಿಕನನ್ನು ಪರ್ವೇಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಸೇನಾ ಪಡೆ ಹಾರಿಸಿದ ಗುಂಡಿಗೆ ಗುರಿಯಾದ ನಾಗರಿಕರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಈ ಪೈಕಿ ಓರ್ವ ನಾಗರಿಕ ಮೃತಪಟ್ಟಿದ್ದಾನೆ.    
ಪುಲ್ವಾಮಾ ಜಿಲ್ಲೆಯ ಮನೆಯೊಂದನ್ನು ರಕ್ಷಣಾ ಬಂಕರ್ ನನ್ನಾಗಿ ಉಗ್ರರು ಬಳಸಿಕೊಂಡಿದ್ದರು. ಈ ಮಾಹಿತಿಯನ್ನು ಪಡೆದು ಸೇನಾಪಡೆ ಗುಂಡಿನ ದಾಳಿ ನಡೆಸಿದೆ. ಉಗ್ರರು- ಸೇನೆ ನಡುವಿನ ಗುಂಡಿನ ಕಾಳಗದಲ್ಲಿ  ಜನಸಾಮಾನ್ಯರಿಗೆ ಗುಂಡೇಟು ತಗುಲಿರುವುದಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ