ನವದೆಹಲಿ: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು ಭಾರತಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ವಾಂಸಕ ಕೃತ್ಯಗಳು ನಡೆಸುವ ಸಂಚು ರೂಪಿಸಲು ಮುಂದಾಗಿ ಶಂಕಿತ ಉಗ್ರರನ್ನು ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
ರಾಷ್ಟ್ರೀಯ ತನಿಖಾ ದಳ ಹಾಗೂ ಗುಪ್ತಚರ ಇಲಾಖೆಯ ಮಾರ್ಗದರ್ಶನ ಮೇರೆಗೆ ದೇಶಾದ್ಯಂತ ಕಾರ್ಯಾಚರಣೆ ನಡೆಸಿದ ಎಟಿಎಸ್ ಅಧಿಕಾರಿಗಳು 11 ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ 6, ಹೈದರಾಬಾದ್ನಲ್ಲಿ 4 ಹಾಗೂ ಮು ಮುಂಬೈನಲ್ಲಿ ಓರ್ವ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಕೇಂದ್ರ ತನಿಖಾ ದಳ ಮತ್ತು ಕರ್ನಾಟಕ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಮತ್ತು ತುಮಕೂರು ಸೇರಿದಂತೆ ರಾಜ್ಯದಲ್ಲಿ ಒಟ್ಟು ಏಳು ಶಂಕಿತ ಉಗ್ರರನ್ನು ಬಂಧಿಸಿದೆ. ದೆಹಲಿ ಪೊಲೀಸರಿಂದ ಭಾರಿ ಕಟ್ಟೆಚ್ಚರ ಘೋಷಣೆ.
ಜನವರಿ 9ರಂದು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಶಂಕಿತ ಉಗ್ರ ಸೈಯದ್ ಅನ್ಸರ್ ಶಾ ಖಾಸ್ಮಿ ನೀಡಿದ ಮಾಹಿತಿ ಮೇಲೆ ತನಿಖಾ ದಳ ದಾಳಿ ನಡೆಸಿ, ಆರು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಆರು ಉಗ್ರರನ್ನು ದೆಹಲಿಗೆ ಕೊಂಡೊಯ್ಯಲಾಗಿದ್ದು, ತೀವ್ರ ವಿಚಾರಣೆ ನಡೆಸಲಿದ್ದಾರೆ.