ತಮಿಳುನಾಡು ಸಿಎಂ ಜಯಲಲಿತಾ (ಸಂಗ್ರಹ ಚಿತ್ರ) 
ದೇಶ

ಅಕ್ರಮ ಆಸ್ತಿ ಪ್ರಕರಣ: ಕರ್ನಾಟಕದ ವಿರುದ್ಧ ಜಯಾ ಕಿಡಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮ್ಮನ್ನು ದೋಷ ಮುಕ್ತಗೊಳಿಸಿದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿರುವ ಕರ್ನಾಟಕದ ನಡೆಯನ್ನು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಟೀಕಿಸಿದ್ದಾರೆ...

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ  ತಮ್ಮನ್ನು ದೋಷ ಮುಕ್ತಗೊಳಿಸಿದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿರುವ ಕರ್ನಾಟಕದ ನಡೆಯನ್ನು ತಮಿಳುನಾಡು  ಮುಖ್ಯಮಂತ್ರಿ ಜಯಲಲಿತಾ ಅವರು ಟೀಕಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೆಂಡಕಾರಿರುವ ಜಯಲಲಿತಾ ಅವರು, ಕರ್ನಾಟಕ ಸರ್ಕಾರದ ಮೇಲ್ಮನವಿ  ತಮಿಳುನಾಡಿನ ಆಂತರಿಕ ವಿಷಯದಲ್ಲಿ ಮೂಗು ತೂರಿಸುವ ಪ್ರಯತ್ನ ಹಾಗೂ ದೇಶದ ಒಕ್ಕೂಟ ವ್ಯವಸ್ಥೆಯ ಆಶಯಕ್ಕೆ ತದ್ವಿರುದ್ಧ ನಡೆ ಎಂದು ಕಿಡಿಕಾರಿದ್ದಾರೆ.

ಈ ಸಂಬಂಧ ಫೆ.2ರಿಂದ ಆರಂಭವಾದಾಗಲಿರುವ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ತಾವು ಮಂಡಿಸಲಿರುವ ಆರು ಪುಟಗಳ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು,  ತಮಿಳುನಾಡಿನಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಕರ್ನಾಟಕಕ್ಕೆ ಯಾವ ಅಧಿಕಾರವಿದೆ. ನ್ಯಾಯ ಸಮ್ಮತ  ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆಗೆ ಹಸ್ತಾಂತರಿಸಿದ ಕಾರಣಕ್ಕೆ ಆ ರಾಜ್ಯ ಸರ್ಕಾರ ಪ್ರಕರಣದ  ಭಾಗಿದಾರನಾಗಿದೆಯಷ್ಟೇ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್