ಭಾವನ ಅರೋರಾ 
ದೇಶ

ಕೇಜ್ರಿವಾಲ್ ಮೇಲೆ ಮಸಿ ದಾಳಿ ಮಾಡಿದ್ದ ಮಹಿಳೆಗೆ ಜಾಮೀನು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಮಸಿ ಎರಚಿ ಜೈಲು ಪಾಲಾಗಿದ್ದ ಮಹಿಳೆಗೆ ಶುಕ್ರವಾರ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಮಸಿ ಎರಚಿ ಜೈಲು ಪಾಲಾಗಿದ್ದ ಮಹಿಳೆಗೆ ಶುಕ್ರವಾರ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಸಿಎಂ ಮೇಲೆ ಮಸಿ ಎರಚಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ 26 ವರ್ಷದ ಭಾವನ ಅರೋರಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂಜೀವ್ ಕುಮಾರ್ ಅಗರವಾಲ್ ಅವರು, 10 ಸಾವಿರ ರುಪಾಯಿ ಶ್ಯೂರಿಟಿ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ.
ವಿಚಾರಣೆ ವೇಳೆ ಅರೋರಾ ಪರ ವಕೀಲ ಪ್ರದೀಪ್ ರಾಣಾ ಅವರು, ತನ್ನ ಕಕ್ಷಿದಾರೆ ರಾಜ್ಯದ ಮುಖ್ಯಮಂತ್ರಿ ಮೇಲೆ ಮಸಿ ಎರಚಿದ್ದು ತಪ್ಪು ಅಂತ ಒಪ್ಪಿಕೊಂಡಿದ್ದಾರೆ. ಪ್ರಕರಣದಿಂದ ನಾವು ಈಗಾಗಲೇ ಪಾಠ ಕಲಿತಿದ್ದೇವೆ. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು.
ಆದರೆ ಅರೋರಾ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ತನಿಖಾ ಸಂಸ್ಥೆ, ರಾಜ್ಯದ ಮುಖ್ಯಸ್ಥರ ಮುಖಕ್ಕೆ ಮಸಿ ಬಳಿಯುವ ಮೂಲಕ ಆರೋಪಿ ತಪ್ಪು ಮಾಡಿದ್ದಾರೆ. ಅದರ ಹಿಂದೆ ಯಾರ ಕೈವಾಡ ಇದೆ ಎಂಬುದರ ಬಗ್ಗೆ ನಾವು ತನಿಖೆ ನಡೆಸುತ್ತಿದ್ದು, ಆರೋಪಿಗೆ ಜಾಮೀನು ನೀಡಬೇಡಿ ಎಂದು ಮನವಿ ಮಾಡಿದರು
ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಅಗರವಾಲ್ ಅವರು, ಆರೋಪಿ ಜನವರಿ 18ರಿಂದ ಜೈಲಿನಲ್ಲಿದ್ದಾಳೆ. ಇನ್ನು ಅವರನ್ನು ಜೈಲಿನಲ್ಲಿಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT