ನಿತೀಶ್ ಕುಮಾರ್- ಪ್ರಶಾಂತ್ ಕಿಶೋರ್ (ಸಂಗ್ರಹ ಚಿತ್ರ) 
ದೇಶ

ನಿತೀಶ್ ಕುಮಾರ್ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್ ನೇಮಕ

2015 ರ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟಕ್ಕೆ ದೂರೆತ ಗೆಲುವಿನ ರೂವಾರಿ ಎಂದೇ ಗುರುತಿಸಲಾದ ಪ್ರಶಾಂತ್ ಕಿಶೋರ್ ಗೆ ನಿತೀಶ್ ಕುಮಾರ್ ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ.

ಪಾಟ್ನಾ: 2015 ರ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟಕ್ಕೆ ದೂರೆತ ಗೆಲುವಿನ ರೂವಾರಿ ಎಂದೇ ಗುರುತಿಸಲಾದ ಪ್ರಶಾಂತ್ ಕಿಶೋರ್ ಗೆ ನಿತೀಶ್ ಕುಮಾರ್ ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ.
ಪ್ರಶಾಂತ್ ಕಿಶೋರ್ ಅವರನ್ನು ಬಿಹಾರ ಮುಖ್ಯಮಂತ್ರಿ ಅವರ ಸಲಹೆಗಾರರಾಗಿ ನೇಮಕ ಮಾಡಿರುವುದರ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದ್ದು, ಪ್ರಶಾಂತ್ ಕಿಶೋರ್ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡಲಾಗಿದೆ.
2014 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಯಶಸ್ಸಿಗೆ ಕಾರಣವಾಗಿದ್ದ ಪ್ರಶಾಂತ್ ಕಿಶೋರ್ 2015 ರ ಬಿಹಾರ ವಿಧಾನಸಭಾ ಚುನಾವಣೆ ವೇಳೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಪ್ರಚಾರ  ಕಾರ್ಯತಂತ್ರ ರೂಪಿಸುವ ಜವಾಬ್ದಾರಿ ಹೊತ್ತಿದ್ದರು. ಪ್ರಶಾಂತ್ ಕಿಶೋರ್ ಅವರ ಕಾರ್ಯತಂತ್ರ ಯಶಸ್ವಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಮತ್ತೊಮ್ಮೆ ಅಧಿಕಾರ ಪಡೆಯಲು ಸಹಕಾರಿಯಾಗಿತ್ತು. ಪ್ರಶಾಂತ್ ಕಿಶೋರ್ ಬಿಹಾರದ ಬಕ್ಸರ್ ಮೂಲದವರಾಗಿದ್ದು ಯುಎನ್ ಆರೋಗ್ಯ ತಜ್ಞನ ಕೆಲಸಕ್ಕೆ 2011 ರಲ್ಲಿ ರಾಜೀನಾಮೆ ನೀಡಿ ಭಾರತಕ್ಕೆ ವಾಪಸ್ಸಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT